ಅಡುಗೆ ಅನಿಲ ದರ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ
ಕಲಬುರಗಿ, 09 ಮಾರ್ಚ್ (ಹಿ.ಸ.): ಆ್ಯಂಕರ್: ಕೇಂದ್ರ ಸರ್ಕಾರದ ಅಡುಗೆ ಅನಿಲ ದರ ಏರಿಕೆಯನ್ನು ಖಂಡಿಸಿ ಕಲಬುರಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಸೌಮ್ಯಾ ರೆಡ್ಡಿ ಅವರ ಆದೇಶದ ಮೇರೆಗೆ ಆಯೋಜಿಸಲಾದ ಈ ಪ್ರತಿಭಟನೆಗೆ ಜಿ
Protest


ಕಲಬುರಗಿ, 09 ಮಾರ್ಚ್ (ಹಿ.ಸ.):

ಆ್ಯಂಕರ್:

ಕೇಂದ್ರ ಸರ್ಕಾರದ ಅಡುಗೆ ಅನಿಲ ದರ ಏರಿಕೆಯನ್ನು ಖಂಡಿಸಿ ಕಲಬುರಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಸೌಮ್ಯಾ ರೆಡ್ಡಿ ಅವರ ಆದೇಶದ ಮೇರೆಗೆ ಆಯೋಜಿಸಲಾದ ಈ ಪ್ರತಿಭಟನೆಗೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮೈತ್ರಿರೇಣುಕಾ ಸಿಂಗೆ ನೇತೃತ್ವ ವಹಿಸಿದ್ದರು. ಪ್ರತಿಭಟನೆಯಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಹಾಗೂ ಪದಾಧಿಕಾರಿಗಳು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಅಡುಗೆ ಅನಿಲದ ದರ ನಿರಂತರವಾಗಿ ಏರಿಕೆಯಾಗುತ್ತಿರುವುದರಿಂದ ಸಾಮಾನ್ಯ ಜನತೆ, ವಿಶೇಷವಾಗಿ ಗೃಹಿಣಿಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ತಕ್ಷಣವೇ ಅಡುಗೆ ಅನಿಲದ ದರವನ್ನು ಕಡಿಮೆ ಮಾಡಿ ಜನರಿಗೆ ಪರಿಹಾರ ಒದಗಿಸಬೇಕು ಎಂದು ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande