ಮಾರ್ಚ ೨೩ರಂದು ದೇವರ ದಾಸಿಮಯ್ಯ ಜಯಂತಿ : ಎಡಿಸಿ ಸಿದ್ರಾಮೇಶ್ವರ
ಕೊಪ್ಪಳ, 09 ಮಾರ್ಚ್ (ಹಿ.ಸ.) ಆ್ಯಂಕರ್: ಮಾರ್ಚ್ 23 ರಂದು ಜಿಲ್ಲಾ ಕೇಂದ್ರದಲ್ಲಿ ಶ್ರೀ ದೇವರ ದಾಸಿಮಯ್ಯ ಜಯಂತಿಯನ್ನು ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಸಂಬ0ಧಿಸಿದ ಅಧಿಕಾರಿಗಳು ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅಪರ ಜಿಲ
ಕೊಪ್ಪಳ


ಕೊಪ್ಪಳ


ಕೊಪ್ಪಳ


ಕೊಪ್ಪಳ, 09 ಮಾರ್ಚ್ (ಹಿ.ಸ.)

ಆ್ಯಂಕರ್: ಮಾರ್ಚ್ 23 ರಂದು ಜಿಲ್ಲಾ ಕೇಂದ್ರದಲ್ಲಿ ಶ್ರೀ ದೇವರ ದಾಸಿಮಯ್ಯ ಜಯಂತಿಯನ್ನು ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಸಂಬ0ಧಿಸಿದ ಅಧಿಕಾರಿಗಳು ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಮವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶ್ರೀ ದೇವರ ದಾಸಿಮಯ್ಯ ಜಯಂತಿ ಆಚರಣೆ ಕುರಿತು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಕೊಪ್ಪಳ ಜಿಲ್ಲಾ ಮಟ್ಟದ ಶ್ರೀ ದೇವರ ದಾಸಿಮಯ್ಯ ಜಯಂತಿ ಆಚರಣೆಯನ್ನು ಮಾರ್ಚ್ 23 ರಂದು ಆಚರಿಸಲಾಗುವುದು. ಅಂದು ಬೆಳಿಗ್ಗೆ 8.30ಕ್ಕೆ ಶ್ರೀ ದೇವರ ದಾಸಿಮಯ್ಯ ಭಾವಚಿತ್ರದ ಮೆರವಣಿಗೆಯು ಬನ್ನಿಕಟ್ಟಯಿಂದ ಪ್ರಾರಂಭಗೊಂಡು ಸಾಹಿತ್ಯ ಭವನದವರಿಗೆ ಜರುಗಲಿದೆ. ನಂತರ ಬೆಳಿಗ್ಗೆ 10 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪೂಜೆ, ಶ್ರೀ ದೇವರ ದಾಸಿಮಯ್ಯ ಕುರಿತು ವಿಶೇಷ ಉಪನ್ಯಾಸ ಹಾಗೂ ಇತರೆ ಕಾರ್ಯಕ್ರಮಗಳು ನಡೆಯಲಿವೆ. ಎಂದು ಅವರು ತಿಳಿಸಿದರು.

ಸಮಾರಂಭ ದಿನದಂದು, ಮೆರವಣಿಗೆ ಮಾರ್ಗದ ಸ್ವಚ್ಛತೆ, ಕಾರ್ಯಕ್ರಮದ ಸ್ಥಳದ ಸ್ವಚ್ಛತೆ, ಮೆರವಣಿಗೆಯಲ್ಲಿ ಹಾಗೂ ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಮತ್ತು ಜಿಲ್ಲಾ ಮಟ್ಟದ ಜಯಂತಿ ಆಚರಣೆ ಕಾರ್ಯಕ್ರಮಕ್ಕಾಗಿ ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಜಯಂತಿ ದಿನದಂದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ, ಎಲ್ಲಾ ಕಚೇರಿಗಳಲ್ಲಿ ಹಾಗೂ ಶಾಲಾ ಮತ್ತು ಕಾಲೇಜುಗಳಲ್ಲಿಯೂ ಜಯಂತಿ ಆಚರಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಯಂತಿ ಕಾರ್ಯಕ್ರಮ ಯಶಸ್ವಿಗೆ ಸಮಾಜದ ಎಲ್ಲಾ ಮುಖಂಡರು, ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ, ಸಮಾಜದ ಮುಖಂಡರಾದ ಶಿವಶಂಕರಪ್ಪ ಬನ್ನಿ, ನಾರಾಯಣಪ್ಪ ಹುಲಮನಿ, ವೀರಣ ಕೋಟಿ ಭಾಗ್ಯನಗರ, ಕೃಷ್ಣಗೌಡ ಮೇದಿಕೇರಿ, ವಿಠ್ಠಲ ಧುತ್ತಾರಗಿ, ಜ್ಯೋತಿ ಮೋನಿ, ಸವಿತಾ, ಪೂಜಾ ಗಾಳಿ, ಸುನಿತಾ ಶ್ಯಾವಿ, ವಸಂತಗೌಡ ಕೊಪ್ಪರದ ಸೇರಿದಂತೆ ಮತ್ತಿತರರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande