ಕರಾಮುವಿ ವಿಶ್ವವಿದ್ಯಾನಿಲಯ : ನಾನಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
ಬಳ್ಳಾರಿ, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26ನೇ ಶೈಕ್ಷಣಿಕ ವರ್ಷದ ಜನವರಿ ಆವೃತ್ತಿಯ ಯುಜಿಸಿ ಅನುಮೋದಿತ ವಿವಿಧ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಕೋರ್ಸ್ಗಳು : ಪದವಿ: ಬಿ.ಎ., ಬಿ.ಕಾಂ., ಬಿ.ಎಸ್
ಕರಾಮುವಿ ವಿಶ್ವವಿದ್ಯಾನಿಲಯ : ನಾನಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ


ಬಳ್ಳಾರಿ, 01 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26ನೇ ಶೈಕ್ಷಣಿಕ ವರ್ಷದ ಜನವರಿ ಆವೃತ್ತಿಯ ಯುಜಿಸಿ ಅನುಮೋದಿತ ವಿವಿಧ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಕೋರ್ಸ್ಗಳು :

ಪದವಿ: ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಬಿ.ಸಿ.ಎ., ಬಿ.ಲಿಬ್.ಐ.ಎಸ್ಸಿ., ಬಿ.ಎಸ್.ಡಬ್ಲ್ಯೂ.

ಸ್ನಾತಕೋತ್ತರ ಪದವಿ: ಎಂ.ಎ., ಎಂ.ಕಾಮ್., ಎಂ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಎಂ.ಲಿಬ್.ಐ.ಎಸ್ಸಿ.

ಇತರೆ: ಪಿಜಿ ಸರ್ಟಿಫಿಕೇಟ್, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳು.

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ರಕ್ಷಣಾ ಇಲಾಖೆ ಅಥವಾ ಮಾಜಿ ಸೈನಿಕರಿಗೆ ಹಾಗೂ ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ವಿಶೇಷ ರಿಯಾಯಿತಿ ಇರುತ್ತದೆ.

ಕೋವಿಡ್ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ, ದೃಷ್ಟಿಹೀನ ವಿದ್ಯಾರ್ಥಿಗಳಿಗೆ ಹಾಗೂ ತೃತೀಯ ಲಿಂಗಿಗಳಿಗೆ ಯಾವುದೇ ಬೋಧನಾ ಶುಲ್ಕ ಇರುವುದಿಲ್ಲ.

ಆಸಕ್ತ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್ www.ksoumysuru.ac.in ನಲ್ಲಿ ಲಭ್ಯವಿರುವ ಪ್ರಾಸ್ಪೆಕ್ಟಸ್ ಓದಿಕೊಂಡು, ಆನ್ಲೈನ್ ಅಡ್ಮಿಷನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರವೇಶಾತಿ ಪಡೆಯಲು ಏಪ್ರಿಲ್ 10 ಕೊನೆಯ ದಿನವಾಗಿರುತ್ತದೆ.

ಅರ್ಜಿ ಸಲ್ಲಿಸುವಾಗ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದಲ್ಲಿ ಆನ್-ಲೈನ್ ಸಹಾಯವಾಣಿ: 8800335638 / 8690544544 ಅಥವಾ ಮೊ.9986696487 ಗೆ ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕರಾಮುವಿ ಪ್ರಾದೇಶಿಕ ಕೇಂದ್ರ, ಜಿಲ್ಲಾ ಕ್ರೀಡಾಂಗಣದ ಹತ್ತಿರ, ಪ್ರಾದೇಶಿಕ ವಿಜ್ಞಾನ ಕೇಂದ್ರದ ಹಿಂಭಾಗ, ನಲ್ಲಚೆರವು ಪ್ರದೇಶ, ಬಳ್ಳಾರಿ-583102. ವಿದ್ಯಾರ್ಥಿಗಳು ನೇರವಾಗಿ ಈ ವಿಳಾಸಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

ಬಳ್ಳಾರಿ ಪ್ರಾದೇಶಿಕ ಕೇಂದ್ರದಲ್ಲಿ ಈಗಾಗಲೇ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಳ್ಳುವಂತೆ ಪ್ರಾದೇಶಿಕ ನಿರ್ದೇಶಕ ನಾಗೇಶ್.ಎಂ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande