
ದಿಬ್ರುಗಢ, 01 ಏಪ್ರಿಲ್ (ಹಿ.ಸ.) :
ಆ್ಯಂಕರ್ : 2026ರ ಅಸ್ಸಾಂ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಏಪ್ರಿಲ್ 9ರಂದು ನಡೆಯಲಿರುವ 126 ವಿಧಾನ ಸಭಾ ಕ್ಷೇತ್ರಗಳ ಚುನಾವಣೆಗೆ ಆಡಳಿತ ಮತ್ತು ಪ್ರತಿ ಪಕ್ಷಗಳು ಬಿರುಸಿನ ಪ್ರಚಾರ ನಡೆಸುತ್ತಿವೆ. ಈ ನಡುವೆ, ಬಿಜೆಪಿ ತನ್ನ ಶಕ್ತಿ ಪ್ರದರ್ಶನ ಮುಂದುವರಿಸಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಗೋಗಮುಖ್ ಹಾಗೂ ಬಿಸ್ವಾನಾಥ್ ಪ್ರದೇಶಗಳಲ್ಲಿ ಎರಡು ಪ್ರಮುಖ ಚುನಾವಣಾ ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಇಂದು ಗೋಗಮುಖ್ನಲ್ಲಿ ಮೊದಲ ರ್ಯಾಲಿಯಲ್ಲಿ ಭಾಗವಹಿಸಲಿರುವ ಅವರು, ಧೇಮಾಜಿ ಮತ್ತು ಲಖಿಂಪುರ ಜಿಲ್ಲೆಗಳ ಬಿಜೆಪಿ ಅಭ್ಯರ್ಥಿಗಳಾದ ಡಾ. ರನೋಜ್ ಪೆಗು ಮತ್ತು ನವ ಕುಮಾರ್ ದಲೈ ಪರ ಮತಯಾಚನೆ ನಡೆಸಲಿದ್ದಾರೆ.
ಅದಾದ ನಂತರ ಮಧ್ಯಾಹ್ನ 1 ಗಂಟೆಗೆ ಬಿಸ್ವಾನಾಥ್ನಲ್ಲಿ ನಡೆಯುವ ಎರಡನೇ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಬಿಸ್ವಾನಾಥ್, ಬಿಹಾಲಿ ಮತ್ತು ಗಹ್ಪುರ್ ಕ್ಷೇತ್ರಗಳ ಅಭ್ಯರ್ಥಿಗಳಾದ ರಂಜಿತ್ ದತ್ತಾ, ಪಲ್ಲವ್ಲೋಚನ್ ದಾಸ್ ಮತ್ತು ಉತ್ಪಲ್ ಬೋರಾ ಪರ ಪ್ರಚಾರ ನಡೆಸಲಿದ್ದಾರೆ.
ಬಿಹಾಲಿಯ ಕುಲಗುರಿ ಮೈದಾನದಲ್ಲಿ ನಡೆಯಲಿರುವ ಈ ಸಭೆಗೆ ಸುಮಾರು 70,000 ಜನರು ಸೇರುವ ನಿರೀಕ್ಷೆಯಿದೆ. ಕಾರ್ಯಕ್ರಮದ ಹಿನ್ನೆಲೆ ಜಿಲ್ಲೆಯಲ್ಲಿ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa