
ಬಾಗಲಕೋಟೆ, 01 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ಚಟುವಟಿಕೆಗಳು ವೇಗ ಪಡೆದುಕೊಂಡಿದ್ದು, ಇಂದು ನಗರದ ಬೈಪಾಸ್ ರಸ್ತೆಯ ಕಂಟಿ ರೆಸಾರ್ಟ್ನಲ್ಲಿ ಪ್ರಮುಖ ಸಭೆ ನಡೆಯಿತು.
ಈ ಸಭೆಯಲ್ಲಿ ಪಕ್ಷದ ಅಭ್ಯರ್ಥಿಯ ಭರ್ಜರಿ ಗೆಲುವು ಸಾಧಿಸುವ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಯಾದ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ, ಸಚಿವರಾದ ಸತೀಶ್ ಜಾರಕಿಹೊಳಿ, ಬೈರತಿ ಸುರೇಶ್ ಹಾಗೂ ಕೆ.ಎಚ್. ಮುನಿಯಪ್ಪ ಸೇರಿದಂತೆ ಹಲವು ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಪಕ್ಷದ ಹಿರಿಯ ಮುಖಂಡರು ಭಾಗವಹಿಸಿದ್ದರು.
ಸಭೆಯಲ್ಲಿ ಮಾತನಾಡಿದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳು ಹಾಗೂ ಜನಪರ ಯೋಜನೆಗಳು ರಾಜ್ಯದ ಜನರ ಮನೆ-ಮನೆಗೆ ತಲುಪಿದ್ದು, ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದು ಹೇಳಿದರು.
ಸರ್ಕಾರದ ಈ ಅಭಿವೃದ್ಧಿ ಪರ ಕಾರ್ಯಕ್ರಮಗಳೇ ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ತಂದುಕೊಡಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಇದಲ್ಲದೆ, ಬಾಗಲಕೋಟೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕ್ಷೇತ್ರದ ಮತದಾರರಿಗೆ ನಾಯಕರು ಮನವಿ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande