ಬಾಗಲಕೋಟೆ ಚುನಾವಣೆಯಲ್ಲಿ ಸತೀಶ್ ಜಾರಕಿಹೋಳಿ ಪ್ರಚಾರ
ನಾನಾ
ಸತೀಶ್


ಬಾಗಲಕೋಟೆ, 01 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರವಾಗಿ ಸತೀಶ ಜಾರಕಿಹೊಳಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

ಕ್ಷೇತ್ರದ ನಾನಾ ಭಾಗಗಳಲ್ಲಿ ನಡೆದ ಪ್ರಚಾರ ಕಾರ್ಯಕ್ರಮಗಳಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ, ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಿದರು.

“ಸಾಹುಕಾರ್” ಎಂದೇ ಜನಪ್ರಿಯರಾಗಿರುವ ಸತೀಶ ಜಾರಕಿಹೊಳಿ ಅವರು ಕಾಲಿಟ್ಟ ಕಡೆ ಜಯದ ಪತಾಕೆ ಹಾರಿಸುವ ನಾಯಕರು ಎಂದು ಕಾರ್ಯಕರ್ತರು ಘೋಷಣೆಗಳನ್ನು ಕೂಗು ಮೂಲಕ ಬಿರುಸಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಚಾರ ನಡೆಸಿದರು.

ಇದೇ ವೇಳೆ ಕಾರ್ಯಕರ್ತರ ಹಾಗೂ ಮುಖಂಡರ ಸಭೆ ನಡೆಸಿದ ಜಾರಕಿಹೋಳಿ ಕ್ಷೇತ್ರದ ಅಭಿವೃದ್ಧಿ ಮತ್ತು ಜನಪರ ಯೋಜನೆಗಳ ಮೂಲಕ ಮತದಾರರ ಮನ ಗೆಲ್ಲುವ ವಿಶ್ವಾಸ ವ್ಯಕ್ತವಾಗಿದ್ದು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಅದಕ್ಕೆ ಶ್ರಮವಹಿಸಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖ ನಾಯಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande