
ಬಾಗಲಕೋಟೆ, 01 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಯಲ್ಲಿದ್ದು, ಜಿಲ್ಲಾ ಪೊಲೀಸ್ ಇಲಾಖೆ ಜಿಲ್ಲೆಯಾದ್ಯಂತ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಿ ವಾಹನಗಳ ಸಮಗ್ರ ತಪಾಸಣೆ ನಡೆಸುತ್ತಿದೆ.
ಚುನಾವಣಾ ಪ್ರಕ್ರಿಯೆ ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಯುವಂತೆ ಮಾಡುವ ಉದ್ದೇಶದಿಂದ ಪೊಲೀಸ್ ಅಧಿಕಾರಿಗಳು ವಿವಿಧ ಸ್ಥಳಗಳಲ್ಲಿ ವಾಹನಗಳನ್ನು ತಡೆದು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ವಾಹನಗಳ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ತಪಾಸಣೆ ವೇಳೆ ಪೊಲೀಸ್ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಬಾಗಲಕೋಟೆ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande