ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಉನ್ನತ ಮಟ್ಟದ ಸಭೆಯಲ್ಲಿ ಕಾರ್ಯತಂತ್ರ ಚರ್ಚೆ
ಬಾಗಲಕೋಟೆ, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಇಂದು ಕಾಂಗ್ರೆಸ್ ಪಕ್ಷದ ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್,
ಸಭೆ


ಬಾಗಲಕೋಟೆ, 01 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಇಂದು ಕಾಂಗ್ರೆಸ್ ಪಕ್ಷದ ಉನ್ನತ ಮಟ್ಟದ ಸಭೆ ನಡೆಯಿತು.

ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಚಿವ ಸತೀಶ್ ಜಾರಕಿಹೋಳಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದರು.

ಸಭೆಯಲ್ಲಿ ಪಕ್ಷದ ಅಭ್ಯರ್ಥಿ ಉಮೇಶ್ ಎಚ್. ಮೇಟಿ ಅವರ ಪರವಾಗಿ ಕೈಗೊಳ್ಳಬೇಕಾದ ಚುನಾವಣಾ ಕಾರ್ಯತಂತ್ರಗಳು, ಪ್ರಚಾರ ಕಾರ್ಯಕ್ರಮಗಳು ಹಾಗೂ ಮತದಾರರನ್ನು ತಲುಪುವ ಯೋಜನೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.

ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಸಂಘಟಿತವಾಗಿ ಕಾರ್ಯನಿರ್ವಹಿಸುವ ಕುರಿತು ಸುರ್ಜೆವಾಲಾ ಹಾಗೂ ಡಿ ಕೆ ಶಿವಕುಮಾರ್ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಚುನಾವಣಾ ಪ್ರಚಾರದ ಜವಾಬ್ದಾರಿ ಹೊತ್ತಿರುವ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಪಕ್ಷದ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande