
ಬಾಗಲಕೋಟೆ, 01 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಒಳಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಎಲ್ಲ ಸಮುದಾಯಗಳಲ್ಲೂ ಆಕ್ರೋಶ ಹೆಚ್ಚುತ್ತಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಆರೋಪಿಸಿದ್ದಾರೆ. ಈ ಆಕ್ರೋಶವು ಮುಂದಿನ ಚುನಾವಣೆಯಲ್ಲಿ ಸ್ಪಷ್ಟವಾಗಿ ಕಾಣಿಸಿಕೊಳ್ಳಲಿದೆ ಎಂದು ಅವರು ಹೇಳಿದರು.
ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಒಳಮೀಸಲಾತಿ ವಿಚಾರದಲ್ಲಿ ಸರ್ಕಾರ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳದೇ ಜನರನ್ನು ಗೊಂದಲಕ್ಕೆ ದೂಡಿದೆ ಎಂದು ಟೀಕಿಸಿದರು. ಸರ್ಕಾರದ ನೀತಿಗಳ ವಿರುದ್ಧ ವಿವಿಧ ಸಮುದಾಯಗಳಲ್ಲಿ ಅಸಮಾಧಾನ ಹೆಚ್ಚುತ್ತಿರುವುದು ಚುನಾವಣಾ ಫಲಿತಾಂಶದಲ್ಲಿ ಪ್ರತಿಫಲಿಸಲಿದೆ ಎಂದು ಅಭಿಪ್ರಾಯಪಟ್ಟರು.
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಉಮೇಶ್ ಮೇಟಿ ಅವರಿಗೆ ಮತ ಹಾಕಿದರೆ ಮೇಟಿ ಅವರ ಆತ್ಮಕ್ಕೆ ಶಾಂತಿ ಸಿಗುತ್ತದೆ” ಎಂದು ಹೇಳಿರುವ ಹೇಳಿಕೆಗೆ ವ್ಯಂಗ್ಯವಾಡಿದ ಲಿಂಬಾವಳಿ, ಜನರ ಸಮಸ್ಯೆಗಳನ್ನು ಬಗೆಹರಿಸುವುದರ ಬದಲು ಇಂತಹ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಹೇಳಿದರು.
ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಜನರಲ್ಲಿ ಅಸಮಾಧಾನ ಹೆಚ್ಚಿದ್ದು, ಬಾಗಲಕೋಟೆ ಉಪಚುನಾವಣೆಯಲ್ಲಿ ಅದರ ಪ್ರತಿಫಲ ಕಾಣಲಿದೆ ಎಂದು ಅವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande