
ಬಾಗಲಕೋಟೆ, 01 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿರುವ ವೇಳೆ, ನಟ ಉಪೇಂದ್ರ ಅವರ ಪ್ರಜಾಕೀಯ ಪಕ್ಷ ಕೂಡ ಕಣಕ್ಕಿಳಿದು ಗಮನ ಸೆಳೆಯುತ್ತಿದೆ.
ಪ್ರಜಾಕೀಯ ಪಕ್ಷದಿಂದ ಅಭ್ಯರ್ಥಿಯಾಗಿ ಅಂತೋಷ್ ಆವಾಸೆ ಸ್ಪರ್ಧೆಗೆ ಇಳಿದಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ಗೆ ಸಮಾನವಾಗಿ ಪೈಪೋಟಿ ನೀಡಲು ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ.
ಈ ಕುರಿತು ಹಿಂದುಸ್ತಾನ್ ಸಮಾಚಾರ ಸುದ್ದಿ ಸಂಸ್ಥೆಗೆ ಮಾತನಾಡಿದ ಅವರು, ನಾವು ದುಡ್ಡಿನ ಆಮಿಷ ಅಥವಾ ಸುಳ್ಳು ಭರವಸೆಗಳನ್ನು ನೀಡದೇ ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ತಲುಪುವ ಕಾರ್ಯವನ್ನು ನಡೆಸುತ್ತಿದ್ದೇವೆ ಎಂದು ತಿಳಿಸಿದರು.
ಮತದಾರರನ್ನು ಸೆಳೆಯುವ ಉದ್ದೇಶದಿಂದ ಪ್ರಮಾಣಪತ್ರದ ರೂಪದಲ್ಲಿ ನಮ್ಮ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದೇವೆ. ನಮ್ಮ ಪ್ರಣಾಳಿಕೆ ಸುಳ್ಳು ಭರವಸೆಗಳಲ್ಲ, ಜನರ ನೈಜ ಬೇಡಿಕೆಗಳನ್ನೇ ಒಳಗೊಂಡಿದೆ.
ಮತದಾರರು ಉತ್ತಮವಾಗಿ ಸ್ಪಂದಿಸುತ್ತಿದ್ದು, ತಮ್ಮ ಆಶೀರ್ವಾದದಿಂದ ಪ್ರಜಾಕೀಯ ಪಕ್ಷವನ್ನು ಗೆಲ್ಲಿಸಬೇಕೆಂದು ಮನವಿ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande