ದಾವಣಗೆರೆ ದಕ್ಷಿಣ ಉಪಚುನಾವಣೆ ; ಬೊಮ್ಮಾಯಿ ಮತಯಾಚನೆ
ದಾವಣಗೆರೆ, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆ ನಗರದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಈ ಹಿನ್ನೆಲೆ ನಗರದ ಡಿ.ಸಿ.ಎಂ ಟೌನ್ನ ಶ್ರೀ ವಾಸವಿ ಕಲ್ಯಾಣ ಮಂಟಪದಲ್ಲಿ ಆರ್ಯ ವೈಶ್ಯ ಸಮಾಜದ ಪ್ರಮುಖರ ಸಭೆ ನಡೆಯಿತು. ಸಭೆಯಲ್ಲಿ ಮಾಜಿ ಮುಖ್ಯಮ
Bommai


ದಾವಣಗೆರೆ, 01 ಏಪ್ರಿಲ್ (ಹಿ.ಸ.) :

ಆ್ಯಂಕರ್ : ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆ ನಗರದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಈ ಹಿನ್ನೆಲೆ ನಗರದ ಡಿ.ಸಿ.ಎಂ ಟೌನ್ನ ಶ್ರೀ ವಾಸವಿ ಕಲ್ಯಾಣ ಮಂಟಪದಲ್ಲಿ ಆರ್ಯ ವೈಶ್ಯ ಸಮಾಜದ ಪ್ರಮುಖರ ಸಭೆ ನಡೆಯಿತು.

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿ, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಪರವಾಗಿ ಮತಯಾಚನೆ ನಡೆಸಿದರು.

ಸಮಾಜದ ಬೆಂಬಲವನ್ನು ಕೋರಿದ ಅವರು, ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲು ಬಿಜೆಪಿ ಅಭ್ಯರ್ಥಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿ.ಎಸ್.ಯಡಿಯೂರಪ್ಪ, ಜಿ.ಎಂ.ಸಿದ್ದೇಶ್ವರ, ಶಾಸಕರಾದ ಸಿ.ಸಿ.ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ ಹಾಗೂ ಭಾರತಿ ಶೆಟ್ಟಿ, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ, ಪಕ್ಷದ ಜಿಲ್ಲಾ ಅಧ್ಯಕ್ಷ ರಾಜಶೇಖರ ಸೇರಿದಂತೆ ಅನೇಕ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande