
ದಾವಣಗೆರೆ, 01 ಏಪ್ರಿಲ್ (ಹಿ.ಸ.) :
ಆ್ಯಂಕರ್ : ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಾವಣಗೆರೆ ಗೆ ಆಗಮಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಸಿಎಂ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಪ್ರಚಾರದ ಆರಂಭಿಕ ಹಂತದಲ್ಲೇ ಪಕ್ಷದ ಹಿರಿಯ ನಾಯಕತ್ವದಿಂದ ಬೆಂಬಲ ದೊರೆತಿರುವುದು ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿಸಿದೆ.
ಈ ಸಂದರ್ಭದಲ್ಲಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಎಂ.ಸಿ.ಸುಧಾಕರ ಸೇರಿದಂತೆ ಹಲವು ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa