ವಿಜಯಪುರದಲ್ಲಿ ಬುದ್ಧ–ಬಸವ–ಅಂಬೇಡ್ಕರ್ ಪುಸ್ತಕ ಮೇಳ ; ಪೋಸ್ಟರ್ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ ಡಾ. ಆನಂದ್ ಕೆ.
ನಾನಾ
ಬುಕ್


ವಿಜಯಪುರ, 01 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಏಪ್ರಿಲ್ 10ರಿಂದ 14 ರವರೆಗೆ ವಿಜಯಪುರ ನಗರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ ಬಿಜಾಪುರ ಬುದ್ಧ–ಬಸವ–ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳದ ಜಾಹಿರಾತು ಫಲಕಗಳನ್ನು ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಬಿಡುಗಡೆಗೊಳಿಸಿದರು.

ಪುಸ್ತಕ ಮೇಳವು ಜ್ಞಾನ ಮತ್ತು ಸಾಹಿತ್ಯದ ಅರಿವು ಹೆಚ್ಚಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದು, ಯೋಜನೆಗಳಿಗೆ ನಾನಾ ಪುಸ್ತಕ ಪ್ರಕಾಶಕರು ಹಾಗೂ ಸಾಹಿತ್ಯಾಸಕ್ತರು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಮೇ ಸಾಹಿತ್ಯ ಬಳಗದ ಚೆನ್ನು ಕಟ್ಟಿಮನಿ, ಸೋಮು ರಣದೇವಿ, ಶಿವರಾಜ ಕಟ್ಟಿಮನಿ, ಅಪ್ಪು ಚಿನಗುಂಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande