
ಯಲಬುರ್ಗಾ, 01 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ನ್ಯಾಯಾಂಗ ಇಲಾಖೆ, ಲೋಕೋಪಯೋಗಿ ಇಲಾಖೆ ಕೊಪ್ಪಳ ಹಾಗೂ ಬಾರ್ ಅಸೋಸಿಯೇಷನ್ ಯಲಬುರ್ಗಾ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಯಲಬುರ್ಗಾ ಪಟ್ಟಣದಲ್ಲಿ ನಿರ್ಮಿಸಲಾದ ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಏಪ್ರಿಲ್ 04ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರುಗಳಾದ ನ್ಯಾಯಮೂರ್ತಿ ಹಂಚಾಟೆ ಸಂಜೀವ್ಕುಮಾರ್, ನ್ಯಾಯಮೂರ್ತಿ ಎಂ.ಜಿ. ಶುಕುರೆ ಕಮಲ ಹಾಗೂ ನ್ಯಾಯಮೂರ್ತಿ ಪಿ. ಶ್ರೀ ಸುಧಾ ಅವರ ಉಪಸ್ಥಿತಿಯಲ್ಲಿ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಮತ್ತು ಕೊಪ್ಪಳ ಜಿಲ್ಲೆಯ ಆಡಳಿತ ನ್ಯಾಯಾಧೀಶರಾದ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರು ಯಲಬುರ್ಗಾದ ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡದ ಉದ್ಘಾಟನೆ ನೆರವೇರಿಸುವರು.
ಕರ್ನಾಟಕ ಸರ್ಕಾರದ ಕಾನೂನು, ನ್ಯಾಯ, ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಎಚ್.ಕೆ. ಪಾಟೀಲ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.
ಗೌರವಾನ್ವಿತ ಅತಿಥಿಗಳಾಗಿ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ, ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ ಹಾಗೂ ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಚಂದ್ರ ಶೇಖರ್ ಸಿ., ಯಲಬುರ್ಗಾ ವಕೀಲರ ಸಂಘದ ಅಧ್ಯಕ್ಷರಾದ ಸುಭಾಷಚಂದ್ರ ಎಸ್. ಹೊಂಬಳ, ಪ್ರಧಾನ ಕಾರ್ಯದರ್ಶಿ ಇ.ಟಿ. ಮಹಾಂತೇಶ ಹಾಗೂ ಲೋಕೋಪಯೋಗಿ ಇಲಾಖೆ ಕೊಪ್ಪಳ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಹೇಮಂತ್ ರಾಜ್ ಸೇರಿದಂತೆ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಯಲಬುರ್ಗಾ ಬಾರ್ ಅಸೋಸಿಯೇಷನ್ನ ಎಲ್ಲಾ ಸದಸ್ಯರು ಪಾಲ್ಗೊಳ್ಳುವರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್