ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮ : ಸಿದ್ದರಾಮಯ್ಯ
ದಾವಣಗೆರೆ, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದಾವಣಗೆರೆಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾ
Cm


ದಾವಣಗೆರೆ, 01 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ದಾವಣಗೆರೆಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ರಾಜ್ಯದ ಆರ್ಥಿಕ ಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರಡಿಸಲು ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಅಧಿವೇಶನದಲ್ಲಿ ಬಜೆಟ್ ನ ಬಗ್ಗೆ ವಿಸ್ತೃತ ಚರ್ಚೆಗಳಾಗಿದ್ದು, ಈಗಾಗಲೇ ಸುದೀರ್ಘ ಉತ್ತರವನ್ನೂ ನೀಡಲಾಗಿದೆ. ದೇಶದ ಜಿಡಿಪಿಯು 7.14 ರಷ್ಟಿದ್ದರೆ, ರಾಜ್ಯದ ಜಿಡಿಪಿ 8.1 ರಷ್ಟಿದೆ. ರಾಜ್ಯದ ಬಜೆಟ್ನ ಗಾತ್ರ ಈ ಬಾರಿ ಕಳೆದ ವರ್ಷಕ್ಕಿಂತ 9.4 ರಷ್ಟು ಹೆಚ್ಚಿದೆ. ಕೇಂದ್ರ ಬಜೆಟ್ ಗಿಂತ ಕರ್ನಾಟಕದ ಬಜೆಟ್ ಉತ್ತಮವಾಗಿದೆ. ರಾಜ್ಯ ಜಿಎಸ್ ಟಿ ಸಂಗ್ರಹಣೆಯಲ್ಲಿ ದೇಶಕ್ಕೆ ಎರಡನೇ ಸ್ಥಾನದಲ್ಲಿದೆ, ಬಂಡವಾಳ ಹೂಡಿಕೆಯಲ್ಲಿಯೂ ರಾಜ್ಯ 2 ನೇ ಸ್ಥಾನದಲ್ಲಿದೆ. ಆದಾಗ್ಯೂ ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

ಬಿಜೆಪಿಯವರ ಉಪ ಚುನಾವಣೆ ಪ್ರಣಾಳಿಕೆಯಲ್ಲಿ ಸರ್ಕಾರದ ಬೆಲೆಏರಿಕೆಯನ್ನು ಟೀಕಿಸಲಾಗಿದೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಎಲ್ ಪಿ ಜಿ ಸಿಲಿಂಡರ್ ಗೆ 414 ರೂ. ಇದ್ದದ್ದು , ಪ್ರಧಾನಿ ಮೋದಿಯವರು ಬಂದ ನಂತರ ಈಗ ಸುಮಾರು 1ಸಾವಿರ ವಾಗಿದೆ. ಅಂತೆಯೇ ಪೆಟ್ರೋಲ್, ಡೀಸೆಲ್ ನ ದರವನ್ನೂ ಕೇಂದ್ರ ಸರ್ಕಾರ ಹೆಚ್ಚಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಬೆಲೆಏರಿಕೆಯನ್ನು ಹೋಲಿಸಿದರೆ, ರಾಜ್ಯದಲ್ಲಿ ಗಣನೀಯವಾಗಿ ಬೆಲೆಗಳು ಕಡಿಮೆಯಿದೆ. ಆದ್ದರಿಂದ ಕರ್ನಾಟಕದ ಹಣಕಾಸಿನ ಸ್ಥಿತಿ ಸುಭದ್ರವಾಗಿದ್ದು, ಬಿಜೆಪಿಯವರು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande