
ಗೋಗಮುಖ್, 01 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಅಸ್ಸಾಂನಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗಳು “ಅಭಿವೃದ್ಧಿ ಹೊಂದಿದ ಅಸ್ಸಾಂ ಮೂಲಕ ಅಭಿವೃದ್ಧಿ ಹೊಂದಿದ ಭಾರತ” ನಿರ್ಮಾಣದ ಅಡಿಪಾಯವಾಗಲಿವೆ ಎಂದು ಪ್ರಧಾನಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಧೇಮಾಜಿ ಜಿಲ್ಲೆಯ ಗೋಗಮುಖ್ನಲ್ಲಿ ಬುಧವಾರ ನಡೆದ ಭಾರೀ ಸಾರ್ವಜನಿಕ ಸಭೆಯಲ್ಲಿ ಅವರು ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಮೂರನೇ ಬಾರಿ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣೆ ಘೋಷಣೆಯ ನಂತರ ರಾಜ್ಯದಲ್ಲಿ ತಮ್ಮ ಮೊದಲ ರ್ಯಾಲಿ ನಡೆಸಿದ ಮೋದಿ, ಜನಸಮೂಹದ ಅಪಾರ ಸ್ಪಂದನೆ ‘ಹ್ಯಾಟ್ರಿಕ್’ ಜಯಕ್ಕೆ ಸ್ಪಷ್ಟ ಸೂಚನೆ ಎಂದು ಹೇಳಿದರು.
“ಈ ಚುನಾವಣೆ ಕೇವಲ ಅಸ್ಸಾಂಗೆ ಸೀಮಿತವಲ್ಲ, ಇದು ದೇಶದ ಅಭಿವೃದ್ಧಿಯ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ಹಂತ” ಎಂದು ಅವರು ತಿಳಿಸಿದರು.
ಯುಸಿಸಿ ಜಾರಿ, ಸಂಸ್ಕೃತಿ ರಕ್ಷಣೆ ಭರವಸೆ
ಅಸ್ಸಾಂನಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂದು ಘೋಷಿಸಿದ ಪ್ರಧಾನಿ, ಆರನೇ ವೇಳಾಪಟ್ಟಿ ಪ್ರದೇಶಗಳಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳ ಸಂಪ್ರದಾಯ ಮತ್ತು ಸಂಸ್ಕೃತಿಗೆ ಯಾವುದೇ ಧಕ್ಕೆಯಾಗದಂತೆ ಸಂಪೂರ್ಣ ರಕ್ಷಣೆ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಇದನ್ನು ಅಸ್ಸಾಂನ ಗುರುತಿನ ಸಂರಕ್ಷಣೆಗೆ ಪ್ರಮುಖ ಹೆಜ್ಜೆ ಎಂದು ವಿವರಿಸಿದರು.
ಅಭಿವೃದ್ಧಿ ಸಾಧನೆಗಳ ಪಟ್ಟಿ
ಕಳೆದ ದಶಕದಲ್ಲಿ ಅಸ್ಸಾಂ “ಉತ್ತಮ ಆಡಳಿತ ಮತ್ತು ಸೇವೆಯ ಹೊಸ ಯುಗ” ಕಂಡಿದೆ ಎಂದು ಮೋದಿ ಹೇಳಿದರು. ಸರ್ಬಾನಂದ ಸೋನೋವಾಲ್ ಮತ್ತು ಹಿಮಂತ ಬಿಸ್ವಾ ಶರ್ಮಾ ನೇತೃತ್ವದಲ್ಲಿ ರಾಜ್ಯ ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆದಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಬಡವರ ಕಲ್ಯಾಣ ಯೋಜನೆಗಳಡಿ 22 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಶಾಶ್ವತ ಮನೆ ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ 15 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಮಹಿಳಾ ಸಬಲೀಕರಣ, ರೈತರ ಬೆಂಬಲ
“ಲಖ್ಪತಿ ದೀದಿ” ಯೋಜನೆಯಡಿ ಈಗಾಗಲೇ ಸುಮಾರು ಮೂರು ಲಕ್ಷ ಮಹಿಳೆಯರು ಆರ್ಥಿಕವಾಗಿ ಶಕ್ತಿಶಾಲಿಗಳಾಗಿದ್ದಾರೆ. ಈ ಸಂಖ್ಯೆಯನ್ನು ನಾಲ್ಕು ಮಿಲಿಯನ್ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಪ್ರಧಾನಿ ಹೇಳಿದರು.
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ 11 ಲಕ್ಷ ರೈತರಿಗೆ 730 ಕೋಟಿ ರೂ.ಗಳಿಗೂ ಹೆಚ್ಚು ಪರಿಹಾರ ನೀಡಲಾಗಿದೆ ಎಂದು ವಿವರಿಸಿದರು.
ಪ್ರವಾಹ ನಿಯಂತ್ರಣ, ಮೂಲಸೌಕರ್ಯ ಅಭಿವೃದ್ಧಿ
ಪ್ರವಾಹ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಲು ₹18,000 ಕೋಟಿ ವೆಚ್ಚದಲ್ಲಿ “ಫ್ಲಡ್ ಫ್ರೀ ಅಸ್ಸಾಂ ಮಿಷನ್” ಜಾರಿಗೆ ತರಲಾಗಿದೆ ಎಂದು ಹೇಳಿದರು. ಸುಬನ್ಸಿರಿ ಜಲವಿದ್ಯುತ್ ಯೋಜನೆ ಕೂಡ ಇದರಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಅಭಿಪ್ರಾಯಪಟ್ಟರು.
ಬ್ರಹ್ಮಪುತ್ರ ನದಿಗೆ ಕಳೆದ 60 ವರ್ಷಗಳಲ್ಲಿ ಕಾಂಗ್ರೆಸ್ ಕೇವಲ ಮೂರು ಸೇತುವೆಗಳನ್ನು ನಿರ್ಮಿಸಿದರೆ, ಬಿಜೆಪಿ ಸರ್ಕಾರ ಕಳೆದ ಒಂದು ದಶಕದಲ್ಲಿ ಐದು ಪ್ರಮುಖ ಸೇತುವೆಗಳನ್ನು ನಿರ್ಮಿಸಿದೆ ಎಂದು ಅವಆರೋಗ್ಯ ಕ್ಷೇತ್ರದಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆಯನ್ನು 6ರಿಂದ 14ಕ್ಕೆ ಹೆಚ್ಚಿಸಲಾಗಿದೆ, ಇನ್ನೂ 10 ಕಾಲೇಜುಗಳ ನಿರ್ಮಾಣ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮೋದಿ, ಅದು “ಸ್ವಜನಪಕ್ಷಪಾತ ಮತ್ತು ಮತ ಬ್ಯಾಂಕ್ ರಾಜಕೀಯ” ನಡೆಸುತ್ತಿದೆ ಎಂದು ಆರೋಪಿಸಿದರು. ಅಕ್ರಮ ವಲಸಿಗರನ್ನು ನೆಲೆಗೊಳಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ, ಬಿಜೆಪಿ ಸರ್ಕಾರ ಅಸ್ಸಾಂನ ಭೂಮಿ ಮತ್ತು ಗುರುತನ್ನು ರಕ್ಷಿಸುತ್ತದೆ ಎಂದು ಹೇಳಿದರು.
ತಂತ್ರಜ್ಞಾನ ಕೇಂದ್ರದತ್ತ ಅಸ್ಸಾಂ
ಅಸ್ಸಾಂವನ್ನು ಭವಿಷ್ಯದ ತಂತ್ರಜ್ಞಾನ ಕೇಂದ್ರವನ್ನಾಗಿ ರೂಪಿಸುವ ಗುರಿಯನ್ನು ಪ್ರಧಾನಿ ಒತ್ತಿಹೇಳಿದರು. ರಾಜ್ಯದಲ್ಲಿ ಸ್ಥಾಪನೆಯಾಗುತ್ತಿರುವ ಸೆಮಿಕಂಡಕ್ಟರ್ ಘಟಕದಲ್ಲಿ ಶೀಘ್ರದಲ್ಲೇ ಚಿಪ್ ಉತ್ಪಾದನೆ ಪ್ರಾರಂಭವಾಗಲಿದೆ ಎಂದು ಹೇಳಿದರು.
ಮತ್ತೆ ಬಿಜೆಪಿ ಆಯ್ಕೆ ಮಾಡಲು ಮನವಿ
ಸಭೆಯ ಅಂತ್ಯದಲ್ಲಿ, ರಾಜ್ಯದ ಅಭಿವೃದ್ಧಿಯ ವೇಗವನ್ನು ಇನ್ನಷ್ಟು ಹೆಚ್ಚಿಸಲು ಮತ್ತೊಮ್ಮೆ ಬಿಜೆಪಿ ಸರ್ಕಾರವನ್ನು ಆಯ್ಕೆ ಮಾಡುವಂತೆ ಪ್ರಧಾನಿ ಜನರಿಗೆ ಮನವಿ ಮಾಡಿದರು. “ಅಸ್ಸಾಂ ಇನ್ನೂ ವೇಗವಾಗಿ ಪ್ರಗತಿ ಸಾಧಿಸುತ್ತದೆ ಎಂಬುದು ನನ್ನ ಭರವಸೆ” ಎಂದು ಅವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa