
ಕೊಪ್ಪಳ, 01 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಭಾಗ್ಯನಗರದ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಬ್ಬ ಉದ್ದಿಮೆದಾರರು ಪುರಸಭೆ ಅಧಿನಿಯಮ 1964ರ ಕಲಂ 256ರಡಿ ಉದ್ದಿಮೆ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ ಎಂದು ಪ.ಪಂ ಮುಖ್ಯಾಧಿಕಾರಿ ತಿಳಿಸಿದ್ದಾರೆ.
ಭಾಗ್ಯನಗರದ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಬ್ಬ ಉದ್ದಿಮೆದಾರರು ಸನ್ 2026-27ನೇ ಸಾಲಿನ ಉದ್ದಿಮೆ ಪರವಾನಿಗೆ ಪಡೆಯಬೇಕು ಮತ್ತು ಪ್ರತಿ ವರ್ಷ ಪರವಾನಿಗೆಯನ್ನು ನವೀಕರಣ ಮಾಡಿಸಿಕೊಳ್ಳಬೇಕು.
ಅದರೊಂದಿಗೆ ನೀರಿನ ಕರ ಹಾಗೂ ಆಸ್ತಿ ತೆರಿಗೆಯನ್ನು ಕಡ್ಡಾಯವಾಗಿ ಭರಿಸಬೇಕು. ತಪ್ಪಿದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಮತ್ತು ನ್ಯಾಯಾಲಯದಲ್ಲಿ ದಾವೆ ಹೂಡಲಾಗುವುದು ಎಂದು ಭಾಗ್ಯನಗರ ಪಟ್ಟಣ ಪಂಚಾಯತ ಕಾರ್ಯಾಲಯ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್