
ಕೋಲಾರ, ೦೧ ಏಪ್ರಿಲ್ (ಹಿ.ಸ) :
ಆ್ಯಂಕರ್ : ವ್ಯವಹಾರವನ್ನು ಸರಳೀಕರಣ ಮಾಡುವ ಉದ್ದೇಶದಿಂದ ಕಾರ್ಮಿಕ ವಿರೋಧಿ ಮತ್ತು ಮಾಲೀಕರ ಪರವಾದ ಈ ಕಾರ್ಮಿಕ ಸಂಹಿತೆಗಳನ್ನು ಏಪ್ರಿಲ್ ೧ ರಿಂದ ರಾಜ್ಯದಲ್ಲಿ ಜಾರಿ ಮಾಡುತ್ತಿರುವುದನ್ನು ವಿರೋಧಿಸಿ ಬುಧವಾರ ಸಿಐಟಿಯು ನೇತೃತ್ವದಲ್ಲಿ ನಗರದ ತಹಶೀಲ್ದಾರ್ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಸಿಐಟಿಯು ಜಿಲ್ಲಾ ಖಜಾಂಚಿ ಹೆಚ್.ಬಿ.ಕೃಷ್ಣಪ್ಪ ಮಾತನಾಡಿ ದೇಶದಲ್ಲಿ ೨೦೨೬ರ ಫೆಬ್ರವರಿ ೧೨ರಂದು ನಡೆದ ಐತಿಹಾಸಿಕ ಸಾರ್ವತ್ರಿಕ ಮುಷ್ಕರದ ನಂತರವೂ ಕೇಂದ್ರ ಸರ್ಕಾರ ಈ ವಿಷಯದಲ್ಲಿ ಯಾವುದೇ ಗಂಭೀರ ಚರ್ಚೆಗೆ ಮುಂದೆ ಬಂದಿಲ್ಲ. ಕಾರ್ಮಿಕ ಸಂಹಿತೆಗಳ ರಚನೆಯ ಹಂತದಿAದಲೂ ಕಾರ್ಮಿಕ ಸಂಘಟನೆಗಳೊAದಿಗೆ ಯಾವುದೇ ಸಮಾಲೋಚನೆ ನಡೆಸಿಲ್ಲ. ಭಾರತದ ಕಾರ್ಮಿಕರ ಜೀವನಕ್ಕೆ ಸಂಬoಧಿಸಿದoತಹ ಮಹತ್ವದ ವಿಷಯದ ಬಗ್ಗೆ ಚರ್ಚಿಸಲು ಭಾರತೀಯ ಕಾರ್ಮಿಕ ಸಮ್ಮೇಳನವನ್ನೂ ಕರೆದಿಲ್ಲ. ಇದು ಭಾರತವು ಬದ್ಧವಾಗಿರುವ ಅಂತರರಾಷ್ಟ್ರೀಯ ಕಾರ್ಮಿಕ ಮಾನದಂಡಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದರು
ಕಾರ್ಮಿಕ ಸಂಹಿತೆಗಳು ಕಾರ್ಮಿಕರನ್ನು ಮತ್ತೆ ಬ್ರಿಟಿಷ್ ವಸಾಹತು ಕಾಲದ ಶೋಷಣಾತ್ಮಕ ಪರಿಸ್ಥಿತಿಗಳಿಗೆ ತಳ್ಳಲಿವೆ. ಸ್ವಾತಂತ್ರö್ಯ ಪೂರ್ವ ಮತ್ತು ಸ್ವಾತಂತ್ರೋತ್ತರ ಕಾಲಗಳಲ್ಲಿ ಕಾರ್ಮಿಕ ವರ್ಗವು ಕೆಲಸದ ಸುರಕ್ಷತೆ, ಸಂಘಟನೆಯ ಹಕ್ಕು, ತ್ರಿಪಕ್ಷೀಯ ಮಾತುಕತೆ, ಮುಷ್ಕರ ಹಕ್ಕು, ಸಮರ್ಪಕ ವೇತನ, ಸಾಮಾಜಿಕ ಭದ್ರತೆ, ಸಮಾನ ಕೆಲಸಕ್ಕೆ ಸಮಾನ ವೇತನ, ಬೋನಸ್, ಗ್ರಾಚ್ಯುಟಿ ಮತ್ತು ಪಿಂಚಣಿ ಹಕ್ಕುಗಳಿಗಾಗಿ ಹೋರಾಟ ನಡೆಸಿ ಈ ಹಕ್ಕುಗಳನ್ನು ಗಳಿಸಿದೆ ಎಂದು ನೆನಪಿಸಿದರು.
೧೯೨೬ರ ಟ್ರೇಡ್ ಯೂನಿಯನ್ ಕಾಯ್ದೆಯ ಮೂಲಕ ಸಂಘಟನೆಯ ಹಕ್ಕು ಕಲ್ಪಿಸಲಾಯಿತು. ಬ್ರಿಟಿಷ್ ಕಾಲದಲ್ಲಿ ಐದು ಕಾನೂನುಗಳು ಮತ್ತು ಸ್ವಾತಂತ್ರö್ಯ ನಂತರ ಸಂಸತ್ತಿನ ಮೂಲಕ ಒಟ್ಟು ೪೪ ಕೇಂದ್ರ ಕಾನೂನುಗಳು ಹಾಗೂ ರಾಜ್ಯ ಮಟ್ಟದಲ್ಲಿ ಸುಮಾರು ೧೫೦ ಕಾನೂನುಗಳು ರೂಪಗೊಂಡಿವೆ. ಇವೆಲ್ಲವೂ ಸುಮಾರು ೧೫೦ ವರ್ಷಗಳ ಹೋರಾಟದ ಫಲ. ಆದರೆ, ಈ ಎಲ್ಲಾ ಸಾಧನೆಗಳನ್ನು ಈಗಿನ ಕೇಂದ್ರ ಸರ್ಕಾರ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರಚಿಸುವ ಮೂಲಕ ಅವೆಲ್ಲವನ್ನೂ ಹಿಂಪಡೆಯಲು ಪ್ರಯತ್ನಿಸುತ್ತಿದೆ ಕೂಡಲೇ ಈ ಕಾರ್ಮಿಕ ಸಂಹಿತೆಗಳನ್ನು ವಾಪಸು ಪಡೆಯಬೇಕೆಂದು ಆಗ್ರಹಿಸುತ್ತಿದೆ.
ಪ್ರತಿಭಟನೆಯಲ್ಲಿ ಸಿಐಟಿಯು ತಾಲ್ಲೂಕು ಸಂಚಾಲಕ ಎಂ.ಭೀಮರಾಜ್, ಮುಖಂಡರಾದ ಕಲ್ಪನಾ, ಲೋಕೇಶ್ವರಿ, ಲಕ್ಷ್ಮೀದೇವಿ, ಎಸ್ ಆಶಾ, ರಾಮಚಂದ್ರಪ್ಪ, ಆರೋಗ್ಯನಾಥನ್ ಮತ್ತಿತರರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್