ಬಾಗಲಕೋಟೆ ಉಪಚುನಾವಣೆ ಪ್ರಚಾರ ಸಭೆ ; ಬಿಜೆಪಿ ವಿರುದ್ಧ ಸುರ್ಜೆವಾಲಾ ವಾಗ್ದಾಳಿ
ಬಾಗಲಕೋಟೆ, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೃಹತ್ ಪ್ರಚಾರ ಸಭೆ ನಡೆಯಿತು. ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುರ್ಜೆವಾಲಾ, ರಾಜ
ಉಡುಗೊರೆ


ಬಾಗಲಕೋಟೆ, 01 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೃಹತ್ ಪ್ರಚಾರ ಸಭೆ ನಡೆಯಿತು.

ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುರ್ಜೆವಾಲಾ, ರಾಜ್ಯದಲ್ಲಿ ಕಡು ಬಡವರ ರಕ್ಷಣೆ ಮತ್ತು ಜನಹಿತದ ದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿದೆ ಎಂದು ಹೇಳಿದರು. ಆದರೆ ಬಿಜೆಪಿ ಪಕ್ಷ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಲ್ಲಿ ತಪ್ಪು ಮಾಹಿತಿ ಹರಡಿಸಿ ನೀಚ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.

ಏಪ್ರಿಲ್ 1 ಅನ್ನು ವಿದೇಶಗಳಲ್ಲಿ ಮೂರ್ಖರ ದಿನವಾಗಿ ಆಚರಿಸುತ್ತಾರೆ. ಅದೇ ರೀತಿ ದೇಶದಲ್ಲಿ ಮೋದಿ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲಕ ಜನರ ಜೇಬಿಗೆ ಕತ್ತರಿ ಹಾಕಿ ಜನರನ್ನು ಮೂರ್ಖರನ್ನಾಗಿಸುತ್ತಿದೆ ಎಂದು ವ್ಯಂಗ್ಯವಾಡಿದರು.

ಬಿಜೆಪಿ ಮೇಲೆ ನಂಬಿಕೆ ಇಟ್ಟು ಜನರು ಮತ ನೀಡಿ ಅಧಿಕಾರಕ್ಕೆ ತಂದಿದ್ದರೂ, ಎನ್ಡಿಎ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಜನರಿಗೆ ಇಂದು ಬೆಳಿಗ್ಗೆ ಬೆಳಿಗ್ಗೆ ಫೂಲ್ ಮಾಡಿದೆ ಎಂದು ಟೀಕಿಸಿದರು.

ಬೆಲೆ ಏರಿಕೆಯಿಂದ ಬಡ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಮೋದಿ ಸರ್ಕಾರ ಬಡವರ ಪಾಲಿಗೆ ದೊಡ್ಡ ಕಂಟಕವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಅಡುಗೆ ಅನಿಲದ ಬೆಲೆ ಸುಮಾರು 400 ರೂ. ಇದ್ದರೆ, ಮೋದಿ ಸರ್ಕಾರ ಎರಡು ಬಾರಿ ಸಿಲಿಂಡರ್ ಬೆಲೆ ಹೆಚ್ಚಿಸಿ ಬಡ ಜನರ ಹೊಟ್ಟೆಗೆ ಹೊರೆ ಹಾಕಿದೆ ಎಂದು ಹೇಳಿದರು.

ಇನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಕ ರಸ್ತೆ ತೆರಿಗೆಯನ್ನೂ ಹೆಚ್ಚಿಸಲಾಗಿದೆ. ಕಳೆದ ಐದು ವರ್ಷಗಳಲ್ಲಿ 43 ಸಾವಿರ ಕೋಟಿ ರೂ. ರಸ್ತೆ ತೆರಿಗೆ ಸಂಗ್ರಹಿಸಿದ್ದು, 2025–26ರಲ್ಲಿ 2600 ಕೋಟಿ ರೂ. ಸಂಗ್ರಹಿಸಲಾಗಿದೆ. 2026–27ರಲ್ಲಿ 5000 ಕೋಟಿ ರೂ. ತೆರಿಗೆ ಸಂಗ್ರಹಿಸುವ ಗುರಿ ಹೊಂದಿರುವುದು ಮೋದಿ ಸರ್ಕಾರ ರಾಜ್ಯದ ಜನರಿಗೆ ನೀಡಿರುವ ‘ಉಡುಗರೆ’ ಎಂದು ಸುರ್ಜೆವಾಲಾ ಆರೋಪಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande