ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವ:ರಾಷ್ಟ್ರಪತಿ ಭಾಗಿ
ತುಮಕೂರು, 01 ಏಪ್ರಿಲ್ (ಹಿ.ಸ.): ಆ್ಯಂಕರ್: ತುಮಕೂರು ಸಿದ್ದಗಂಗಾ ಮಠದಲ್ಲಿ ಪರಮ ಪೂಜ್ಯ ಶಿವಕುಮಾರ ಸ್ವಾಮಿಜಿ ಅವರ 119ನೇ ಜನ್ಮದಿನೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ಪ್ರಾತಃಕಾಲದಿಂದಲೇ ಮಠದಲ್ಲಿ ಪೂಜಾ ಕೈಂಕರ್ಯಗಳು ಆರಂಭಗೊಂಡಿದ್ದು, ಶ್ರೀಗಳ ಗದ್ದುಗೆಗೆ ಫಲ-ಪುಷ್ಪಗಳಿಂದ ವಿಶೇಷ ಅಲ
ಸಿದ್ದಗಂಗಾ ಮಠ


ತುಮಕೂರು, 01 ಏಪ್ರಿಲ್ (ಹಿ.ಸ.):

ಆ್ಯಂಕರ್:

ತುಮಕೂರು ಸಿದ್ದಗಂಗಾ ಮಠದಲ್ಲಿ ಪರಮ ಪೂಜ್ಯ ಶಿವಕುಮಾರ ಸ್ವಾಮಿಜಿ ಅವರ 119ನೇ ಜನ್ಮದಿನೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತಿದೆ.

ಪ್ರಾತಃಕಾಲದಿಂದಲೇ ಮಠದಲ್ಲಿ ಪೂಜಾ ಕೈಂಕರ್ಯಗಳು ಆರಂಭಗೊಂಡಿದ್ದು, ಶ್ರೀಗಳ ಗದ್ದುಗೆಗೆ ಫಲ-ಪುಷ್ಪಗಳಿಂದ ವಿಶೇಷ ಅಲಂಕಾರ ಮಾಡಲಾಗಿದೆ. ಲಿಂಗೈಕ್ಯ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನಡೆಯುತ್ತಿದ್ದು, ಮಠಾಧ್ಯಕ್ಷ ಸಿದ್ದಲಿಂಗ ಮಹಾಸ್ವಾಮಿಗಳು ಅವರು ಪೂಜೆ ಸಲ್ಲಿಸುತ್ತಿದ್ದಾರೆ. ಮಂತ್ರಘೋಷಗಳ ನಡುವೆ ಭಕ್ತರು ದರ್ಶನ ಪಡೆಯುತ್ತಿದ್ದಾರೆ.

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳಗ್ಗೆ 10:30ಕ್ಕೆ ಮಠಕ್ಕೆ ಆಗಮಿಸಲಿದ್ದು, ಮಧ್ಯಾಹ್ನ 12:30ರವರೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ರಾಷ್ಟ್ರಪತಿಯವರ ಆಗಮನ ಹಿನ್ನೆಲೆಯಲ್ಲಿ ಮಠದಲ್ಲಿ ಭದ್ರತಾ ಹಾಗೂ ಸಿದ್ಧತೆಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande