
ನವದೆಹಲಿ, 01 ಏಪ್ರಿಲ್ (ಹಿ.ಸ.) :
ಆ್ಯಂಕರ್ : ತುಮಕೂರು ಸಿದ್ದಗಂಗಾ ಮಠದ ಪೂಜ್ಯ ಶಿವಕುಮಾರ ಸ್ವಾಮೀಜಿ ಅವರ ಜಯಂತ್ಯೋತ್ಸವ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.
ತಮ್ಮ ಎಕ್ಸ ಖಾತೆಯಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಶಿವಕುಮಾರ ಸ್ವಾಮೀಜಿಯವರು ಮನುಕುಲದ ಮೇಲಿನ ಕರುಣೆ, ನಮ್ರತೆ ಹಾಗೂ ಅಚಲ ಸೇವೆಯ ಪ್ರತೀಕವಾಗಿದ್ದರು ಎಂದು ಕೊಂಡಾಡಿದ್ದಾರೆ.
ಜನರ ಏಳಿಗೆಗಾಗಿ ತಮ್ಮ ಸಂಪೂರ್ಣ ಜೀವನವನ್ನು ಮುಡಿಪಾಗಿಟ್ಟ ಅವರು, “ನಿಜವಾದ ಶ್ರೇಷ್ಠತೆ ಸೇವೆಯಲ್ಲಿ ಅಡಗಿದೆ” ಎಂಬ ಮಹತ್ವದ ಸಂದೇಶವನ್ನು ತಮ್ಮ ಬದುಕಿನ ಮೂಲಕವೇ ತೋರಿಸಿಕೊಟ್ಟಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ.
ಶಿಕ್ಷಣ, ಸಮಾಜ ಕಲ್ಯಾಣ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಸ್ವಾಮೀಜಿಯವರ ಅಪ್ರತಿಮ ಕೊಡುಗೆಗಳು ಸಮಾಜದ ಮೇಲೆ ಶಾಶ್ವತವಾದ ಛಾಪು ಮೂಡಿಸಿವೆ ಎಂದು ಅವರು ಉಲ್ಲೇಖಿಸಿದ್ದಾರೆ.
ಇಂದಿಗೂ ಶಿವಕುಮಾರ ಸ್ವಾಮೀಜಿಯವರ ಜೀವನ ಮತ್ತು ಆದರ್ಶಗಳು ಅನೇಕ ಜನರಿಗೆ ನಿಸ್ವಾರ್ಥ ಸೇವೆಯ ಹಾದಿಯಲ್ಲಿ ನಡೆಯಲು ಪ್ರೇರಣೆಯಾಗುತ್ತಿವೆ ಎಂದಿರುವ ಪ್ರಧಾನಿ ಮೋದಿ ಅವರೊಂದಿಗಿನ ತಮ್ಮ ಚಿತ್ರವನ್ನು ಹಂಚಿಕೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa