
ವಿಜಯಪುರ, 01 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯ ಆಲಮೇಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೊ. ಸಂಖ್ಯೆ 26/2026ರ ಪ್ರಕರಣದಲ್ಲಿ ಆರೋಪಿತರನ್ನು ಪತ್ತೆಹಚ್ಚಿ ಅವರಿಂದ 11,00,000 ರೂ. ನಗದು ಹಣವನ್ನು ವಶಪಡಿಸಿಕೊಂಡು ನ್ಯಾಯಾಲಯದ ಆದೇಶದಂತೆ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.
ಈ ಪ್ರಕರಣವು ಭಾರತೀಯ ನ್ಯಾಯ ಸಂಹಿತೆ (BNS) ಕಾಯ್ದೆ 2023ರ ಕಲಂ 61 ಮತ್ತು 306ರಡಿ ದಾಖಲಾಗಿದ್ದು, ತನಿಖೆ ನಡೆಸಿದ ಆಲಮೇಲ ಪೊಲೀಸ್ ಠಾಣೆಯ ಅಧಿಕಾರಿಗಳು ಆರೋಪಿತರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ತನಿಖೆ ವೇಳೆ ಆರೋಪಿತರಿಂದ ವಶಪಡಿಸಿಕೊಂಡಿದ್ದ 11 ಲಕ್ಷ ರೂ. ನಗದು ಹಣವನ್ನು ನ್ಯಾಯಾಲಯದ ಆದೇಶದಂತೆ ಮೃತ ವ್ಯಕ್ತಿಯ ವಾರಸುದಾರರಿಗೆ ಮರಳಿ ನೀಡಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಈ ಕಾರ್ಯಾಚರಣೆಯ ಮೂಲಕ ಆಲಮೇಲ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಕರಣವನ್ನು ಸಮರ್ಪಕವಾಗಿ ತನಿಖೆ ನಡೆಸಿ ನ್ಯಾಯ ಒದಗಿಸುವಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದು, ಪ್ರಶಂಸೆ ವ್ಯಕ್ತವಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande