
ಬಳ್ಳಾರಿ, 01 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಬೇಸಿಗೆ ಕ್ರೀಡಾ ತರಬೇತಿ ಶಿಬಿರಗಳನ್ನು ಆಯೋಜಿಸಲಾಗಿದ್ದು, ಆಸಕ್ತ ಕ್ರೀಡಾಪಟುಗಳು ಹಾಗೂ ಕ್ರೀಡಾ ಆಸಕ್ತರಿಂದ ನೋಂದಣಿಗೆ ಆಹ್ವಾನಿಸಲಾಗಿದೆ.
ತರಬೇತಿ ಸ್ಥಳ: ಬಿ.ಡಿ.ಎ.ಎ. ಮೈದಾನದಲ್ಲಿ ಫುಟ್ಬಾಲ್ ತರಬೇತಿ, ಜಿಲ್ಲಾ ಕ್ರೀಡಾ ಸಂಕೀರ್ಣದಲ್ಲಿ ಈಜು ಮತ್ತು ಬ್ಯಾಡ್ಮಿಂಟನ್, ಜಿಲ್ಲಾ ಕ್ರೀಡಾಂಗಣದಲ್ಲಿ ಹಾಕಿ ಮತ್ತು ಅಥ್ಲೆಟಿಕ್ ತರಬೇತಿ ಶಿಬಿರ ನೀಡಲಾಗುತ್ತದೆ.
ಏ.08 ರಿಂದ ಜೂ.04 ರವರೆಗೆ ವಿವಿಧ ಕ್ರೀಡೆಗಳಲ್ಲಿ ತರಬೇತಿ ನೀಡಲಾಗುವುದು. ಕ್ರೀಡಾಪಟುಗಳ ಅನುಕೂಲಕ್ಕಾಗಿ ಎರಡು ಅವಧಿಗಳಲ್ಲಿ ತರಬೇತಿ ನೀಡಲಾಗುತ್ತದೆ (ಬೆಳಿಗ್ಗೆ 06 ರಿಂದ 09 ಗಂಟೆಯವರೆಗೆ ಹಾಗೂ ಸಂಜೆ 04.30 ರಿಂದ 06.30 ಗಂಟೆಯವರೆಗೆ).
ಶಿಬಿರದಲ್ಲಿ ಭಾಗವಹಿಸಲು ಇಚ್ಛಿಸುವವರು ತಮ್ಮ ಹೆಸರನ್ನು ಏ.01 ರಿಂದ 07 ರ ವರೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೇರುವು ಪ್ರದೇಶದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್