ಬೇಸಿಗೆಯಲ್ಲಿ ನೀರಿನ ಸಮಸ್ಯೆ ತಡೆಗೆ ಮುನ್ನೆಚ್ಚರಿಕೆ ; ಚಡಚಣದಲ್ಲಿ ಟಾಸ್ಕ್ ಫೋರ್ಸ್ ಸಭೆ
ನಾನಾ
ನೀತು


ವಿಜಯಪುರ, 01 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮುಂಬರುವ ಬೇಸಿಗೆ ಹಿನ್ನೆಲೆಯಲ್ಲಿ ನಾಗಠಾಣ ಮತಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಚಡಚಣ ಪ್ರವಾಸಿ ಮಂದಿರದ ಸಭಾ ಭವನದಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಸಯಿತು.

ವಿಜಯಪುರ ಜಿಲ್ಲೆಯ ನಾಗಠಾಣ ಕ್ಷೇತ್ರದ ಶಾಸಕ ವಿಠ್ಠಲ್ ಕಟಕದೊಂಡ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಕಟಕದೊಂಡ, ಮುಂಬರುವ ಬೇಸಿಗೆಯಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಯಾವುದೇ ತೊಂದರೆ ಆಗದಂತೆ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ನೀರಿನ ಮೂಲಗಳನ್ನು ಸಮರ್ಪಕವಾಗಿ ಸಂರಕ್ಷಿಸುವುದು, ಟ್ಯಾಂಕರ್ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಮುಂಚಿತವಾಗಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸಲಹೆ ನೀಡಿದರು.

ಇದಲ್ಲದೆ, ತಾಲೂಕಿನ ನಾನಾ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ತಾಲೂಕು ಆಡಳಿತ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ನಾನಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande