ಬಾಗಲಕೋಟೆ ಉಪಚುನಾವಣೆ ; ಉಮೇಶ್ ಮೇಟಿ ಗೆಲುವಿಗೆ ಕಾರ್ಯತಂತ್ರ ರೂಪಿಸಲು ಸುರ್ಜೆವಾಲಾ ನೇತೃತ್ವದಲ್ಲಿ ಸಭೆ
ಬಾಗಲಕೋಟೆ, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಪ್ರಚಾರಕ್ಕೆ ನಿಯೋಜಿಸಲಾದ ಕೆಪಿಸಿಸಿ ವೀಕ್ಷಕರೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಕಾಂಗ್ರ
ಸಭೆ


ಬಾಗಲಕೋಟೆ, 01 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಪ್ರಚಾರಕ್ಕೆ ನಿಯೋಜಿಸಲಾದ ಕೆಪಿಸಿಸಿ ವೀಕ್ಷಕರೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು.

ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರನ್ನು ಬಹುಮತದಿಂದ ಗೆಲ್ಲಿಸಿಕೊಳ್ಳಲು ಕೈಗೊಳ್ಳಬೇಕಾದ ಚುನಾವಣಾ ಪೂರ್ವ ಸಿದ್ಧತೆಗಳು ಹಾಗೂ ಪ್ರಚಾರ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಬೂತ್ ಮಟ್ಟದಿಂದಲೇ ಪಕ್ಷದ ಕಾರ್ಯಕರ್ತರನ್ನು ಸಕ್ರಿಯಗೊಳಿಸಿ, ಮತದಾರರ ಸಂಪರ್ಕ ಹೆಚ್ಚಿಸುವುದು ಸೇರಿದಂತೆ ಯೋಜನೆಗಳಿಗೆ ಪ್ರಚಾರ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ನಡೆಸುವಂತೆ ವೀಕ್ಷಕರಿಗೆ ಹಾಗೂ ಮುಖಂಡರಿಗೆ ಸುರ್ಜೇವಾಲಾ ಸಲಹೆ ಸೂಚನೆಗಳನ್ನು ನೀಡಿದರು.

ಇದೇ ವೇಳೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಗೆಲುವಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಕರೆ ನೀಡಿದರು.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಆರ್ಬಿ ತಿಮ್ಮಾಪುರ, ಲಕ್ಷ್ಮಣ ಅವದಿ ಸೇರಿದಂತೆ ಹಲವು ಮುಖಂಡರು ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande