ನಾಳೆ ಇರಾನ್ ಕುರಿತು ಅಮೆರಿಕ ಅಧ್ಯಕ್ಷ ಟ್ರಂಪ್ ಭಾಷಣ
ವಾಷಿಂಗ್ಟನ್, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಾಳೆ ರಾಷ್ಟ್ರವನ್ನು ಉದ್ದೇಶಿಸಿ ಮಹತ್ವದ ಭಾಷಣ ಮಾಡಲಿದ್ದಾರೆ ಎಂದು ಶ್ವೇತಭವನ ಪ್ರಕಟಿಸಿದೆ. ಈ ಭಾಷಣದಲ್ಲಿ ಇರಾನ್ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ಬಹಿರಂಗಪಡಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
Caroline Leavitt twit


ವಾಷಿಂಗ್ಟನ್, 01 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಾಳೆ ರಾಷ್ಟ್ರವನ್ನು ಉದ್ದೇಶಿಸಿ ಮಹತ್ವದ ಭಾಷಣ ಮಾಡಲಿದ್ದಾರೆ ಎಂದು ಶ್ವೇತಭವನ ಪ್ರಕಟಿಸಿದೆ.

ಈ ಭಾಷಣದಲ್ಲಿ ಇರಾನ್ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ಬಹಿರಂಗಪಡಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಫೆಬ್ರವರಿ 28ರಿಂದ ಅಮೇರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆ, ಈ ಪ್ರಕಟಣೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಟ್ರಂಪ್ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎಂಬ ನಿರೀಕ್ಷೆ ಮೂಡಿಸಿದೆ.

“ಇದನ್ನು ತಪ್ಪಿಸಿಕೊಳ್ಳಬೇಡಿ. ನಾಳೆ ರಾತ್ರಿ 9 ಗಂಟೆಗೆ, ಅಧ್ಯಕ್ಷ ಟ್ರಂಪ್ ಇರಾನ್ ಬಗ್ಗೆ ಪ್ರಮುಖ ಮಾಹಿತಿಯನ್ನು ನೀಡಲು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ” ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.

ಇದೇ ವೇಳೆ, ಅಮೆರಿಕ ಮತ್ತು ಇರಾನ್ ನಡುವೆ ನೇರ ಮಾತುಕತೆ ನಡೆಯುತ್ತಿದೆ ಎಂದು ಟ್ರಂಪ್ ಹೇಳಿರುವ ಸಮಯದಲ್ಲೇ ಈ ಘೋಷಣೆ ಬಂದಿದೆ. ಆದರೆ ಇದನ್ನು ಇರಾನ್ ನಿರಾಕರಿಸಿದ್ದು, ಮಧ್ಯವರ್ತಿಗಳ ಮೂಲಕ ಸಂದೇಶ ವಿನಿಮಯ ಮಾತ್ರ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದೆ.

ಈ ಹಿನ್ನೆಲೆಯಲ್ಲಿ ಟ್ರಂಪ್ ಭಾಷಣದ ಮೇಲೆ ಜಾಗತಿಕ ರಾಜಕೀಯ ವಲಯದ ಕಣ್ಣು ನೆಟ್ಟಿದ್ದು, ಮುಂದಿನ ಕ್ರಮಗಳ ಬಗ್ಗೆ ಕುತೂಹಲ ಹೆಚ್ಚಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande