
ಬಾಗಲಕೋಟೆ, 01 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಯುವ ಮುಖಂಡ ನಂದು ಗಡಗಿ ಅವರು ಭಾರತೀಯ ಜನತಾ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
ಬಾಗಲಕೋಟೆ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನಾಯಕತ್ವವನ್ನು ಒಪ್ಪಿಕೊಂಡು ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಹಾಗೂ ವಿಜಯಪುರ ನಗರ ಮಂಡಲ ಅಧ್ಯಕ್ಷ ಸಂದೀಪ್ ಪಾಟೀಲ್ ಅವರ ಸಮ್ಮುಖದಲ್ಲಿ ನಂದು ಗಡಗಿ ಅವರು ಬಿಜೆಪಿ ಪಕ್ಷಕ್ಕೆ ಸೇರಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಿರಿಯ ನಾಯಕರು ಪಕ್ಷದ ಧ್ವಜ ನೀಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ನಂತರ ಮಾತನಾಡಿದ ನಂದು ಗಡಗಿ, ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಹಾಗೂ ಬಿ.ವೈ. ವಿಜಯೇಂದ್ರ ಅವರ ತತ್ವ ಮತ್ತು ಸಿದ್ಧಾಂತಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಬಲಪಡಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande