ಅಲ್ಪಸಂಖ್ಯಾತರ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿ ಪರೀಕ್ಷೆ ; ನಿಷೇಧಾಜ್ಞೆ ಜಾರಿ
ಕೊಪ್ಪಳ, 10 ಏಪ್ರಿಲ್ (ಹಿ.ಸ.) : ಆ್ಯಂಕರ್ : 2026-27ನೇ ಸಾಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗಾಗಿ ಪರೀಕ್ಷೆಗಳು ಏಪ್ರಿಲ್ 12 ರಂದು ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿ
ಅಲ್ಪಸಂಖ್ಯಾತರ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿ ಪರೀಕ್ಷೆ ; ನಿಷೇಧಾಜ್ಞೆ ಜಾರಿ


ಕೊಪ್ಪಳ, 10 ಏಪ್ರಿಲ್ (ಹಿ.ಸ.) :

ಆ್ಯಂಕರ್ : 2026-27ನೇ ಸಾಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗಾಗಿ ಪರೀಕ್ಷೆಗಳು ಏಪ್ರಿಲ್ 12 ರಂದು ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ 163 ಕಲಂ ಅನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.

2026-27ನೇ ಸಾಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗಾಗಿ ಪರೀಕ್ಷೆಗಳು ಏಪ್ರಿಲ್ 12ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕೊಪ್ಪಳ ತಾಲೂಕಿನಲ್ಲಿ 9 ಪರೀಕ್ಷಾ ಕೇಂದ್ರಗಳು, ಗಂಗಾವತಿ ತಾಲ್ಲೂಕಿನಲ್ಲಿ 7, ಕುಷ್ಟಗಿ ತಾಲ್ಲೂಕಿನಲ್ಲಿ 7, ಯಲಬುರ್ಗಾ ತಾಲ್ಲೂಕಿನಲ್ಲಿ 6 ಸೇರಿದಂತೆ ಕೊಪ್ಪಳ ಜಿಲ್ಲೆಯ ಒಟ್ಟು 29 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷೆಗಳನ್ನು ಸುಗಮ ಮತ್ತು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಅಂತರದ ಪ್ರದೇಶದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.

ನಿಷೇಧಾಜ್ಞೆ ಜಾರಿಯನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ. ಮೊಬೈಲ್, ಪೇಜರ್, ಜರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಹಾಗೂ ನಿಯೋಜಿತ ಶಿಕ್ಷಕರನ್ನು ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನುನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande