
ಬಳ್ಳಾರಿ, 10 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಧಾರವಾಡದ ಸಪ್ತಾಪೂರ ರಸ್ತೆಯಲ್ಲಿರುವ ಮಿಲಿಟರಿ ಬಾಲಕಿಯರ ವಸತಿ ನಿಲಯದಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಧಾರವಾಡದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಯುದ್ಧದಲ್ಲಿ ಮಡಿದ ಯೋಧರ ಮತ್ತು ಮಾಜಿ ಸೈನಿಕರ ಬಳ್ಳಾರಿ ಜಿಲ್ಲೆಯ ಹೆಣ್ಣು ಮಕ್ಕಳು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.
5 ನೇ ತರಗತಿಯಿಂದ ಪಿಯುಸಿ-2 ವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಅರ್ಹರಾಗಿರುತ್ತಾರೆ. ಧಾರವಾಡ ನಗರದ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ಮಾತ್ರ ಈ ವಸತಿ ನಿಲಯದಲ್ಲಿ ಅವಕಾಶವಿರುತ್ತದೆ. ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ವಸತಿ ಮತ್ತು ಊಟೋಪಚಾರದ ವ್ಯವಸ್ಥೆಯು ಸಂಪೂರ್ಣ ಉಚಿತವಾಗಿರುತ್ತದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಉದಯ ಹಾಸ್ಟೇಲ್ ಸರ್ಕಲ್, ಸೈನಿಕ ವಿಶ್ರಾಂತಿ ಗೃಹ ಆವರಣ, ಧಾರವಾಡ. (ದೂ.0836-2440176) ಈ ವಿಳಾಸಕ್ಕೆ ಸಂಪರ್ಕಿಸಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಮೇ 05 ರೊಳಗಾಗಿ ಸಲ್ಲಿಸಬಹುದಾಗಿದೆ. ಮಾಜಿ ಸೈನಿಕರ ಮಕ್ಕಳು ಈ ಸೌಲಭ್ಯದ ಸದುಪಯೋಗಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್