
ಕೊಪ್ಪಳ, 10 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬುಕನಟ್ಟಿ ಗ್ರಾಮದ ಖಾದರಸಾಬ ಓಲೇಕಾರ ಎಂಬ ವ್ಯಕ್ತಿಯು 2023ರ ನವೆಂಬರ್ 14 ರಂದು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪವು ಸಾಬೀತಾಗಿದ್ದು, ಕೊಪ್ಪಳ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ (ಪೆÇೀಕ್ಸೊ) ನ್ಯಾಯಾಲಯದ ನ್ಯಾಯಾಧೀಶರಾದ ಕುಮಾರ ಡಿ.ಕೆ. ಅವರು ಏಪ್ರಿಲ್ 2 ರಂದು ಅಪರಾಧಿಗೆ ಶಿಕ್ಷೆ ವಿಧಿಸಿರುತ್ತಾರೆ.
ಅಪ್ರಾಪ್ತೆ ಬಾಲಕಿಯ ತಂದೆಯು ಬಾಲಕಿಯನ್ನು ಕರೆದುಕೊಂಡು ಉಪಜೀವನಕ್ಕಾಗಿ ಉಡುಪಿಗೆ ಹೋಗಿ ವಾಸವಾಗಿರುತ್ತಾರೆ. ಅವರ ಮನೆಯ ಹತ್ತಿರದಲ್ಲಿ ವಾಸವಾಗಿದ್ದ ಖಾದರಬಾμÁ (ಖಾದರಸಾಬ ಓಲೇಕಾರ) ಇತನು ಬಾಧಿತಳಿಗೆ ಪರಿಚಯ ಮಾಡಿಕೊಂಡು ಸಲುಗೆಯಿಂದ ಮಾತನಾಡಿ, ಬಾಧಿತಳು ತನ್ನ ತಂದೆ ತಾಯಿಯೊಂದಿಗೆ ತಮ್ಮ ಊರಿಗೆ ಬಂದಾಗ ಅಪರಾಧಿಯು 2023ರ ನವೆಂಬರ 14ರಂದು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಾಧಿತಳಿಗೆ ಮೋಟಾರ್ ಸೈಕಲ್ ಮೇಲೆ ಕೂಡಿಸಿಕೊಂಡು ಬಸರಿಹಾಳ ಸೀಮಾದ ಒಂದು ಹೊಲದಲ್ಲಿ ಕರೆದುಕೊಂಡು ಹೋಗಿ ಬಲವಂತವಾಗಿ ಅತ್ಯಾಚಾರ ಮಾಡಿರುತ್ತಾನೆ.
ತದನಂತರದಲ್ಲಿ ಮೈಸೂರಿಗೆ ಕರೆದುಕೊಂಡು ಹೋಗಿ ದೊಡ್ಡ ಕನ್ನೆ ಗ್ರಾಮದ ತೋಟದ ಶೆಡ್ಡಿನಲ್ಲಿ ಆರೋಪಿತನು ಬಾಧಿತಳೊಂದಿಗೆ ಹಲವಾರು ಸಲ ಅತ್ಯಾಚಾರ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮುನಿರಾಬಾದ ಪೆÇೀಲಿಸ ಠಾಣೆಯ ಸುನೀಲ್ ಎಚ್. ಪಿ.ಎಸ್.ಐ ಇವರು ಬಾಧಿತಳ ತಂದೆ ನೀಡಿದ ದೂರನ್ನು ಸ್ವೀಕರಿಸಿ ಪ್ರಥಮ ಹಂತದ ತನಿಖೆಯನ್ನು ನಿರ್ವಹಿಸಿ ಮುಂದಿನ ತನಿಖೆಯನ್ನು ಸುರೇಶ ಡಿ. ಸಿಪಿಐ ಕೊಪ್ಪಳ ವೃತ್ತ ಇವರು ನಿರ್ವಹಿಸಿ ತನಿಖೆಯಲ್ಲಿ ಆರೋಪಿತನ ಮೇಲಿನ ಆರೋಪಣೆಗಳು ಮೇಲ್ನೋಟಕ್ಕೆ ಕಂಡು ಬಂದಿದ್ದರಿಂದ ಆರೋಪಿತನ ವಿರುದ್ಧ ಮಾನ್ಯ ನ್ಯಾಯಾಲಯಕ್ಕೆ ದೋμÁರೋಪಣೆ ಪಟ್ಟಿ ಸಲ್ಲಿಸಿರುತ್ತಾರೆ.
ಈ ಪ್ರಕರಣವು ಸ್ಪೇ.ಎಸ್ಸಿ (ಪೋಕ್ಸೊ) ಸಂ: 31/2024 ರಲ್ಲಿ ದಾಖಲಾಗಿದ್ದು, ವಿಚಾರಣೆಯನ್ನು ನಡೆಸಿದ ಮಾನ್ಯ ನ್ಯಾಯಾಲಯ ಆರೋಪಿತನ ಮೇಲಿನ ಆರೋಪಣೆಗಳು ಸಾಭೀತಾಗಿವೆ ಎಂದು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ರೂ. 75,000 ಗಳ ದಂಡವನ್ನು ಭರಿಸುವಂತೆ ಆದೇಶಿಸಿ, ಕೊಪ್ಪಳ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ (ಪೆÇೀಕ್ಸೊ) ನ್ಯಾಯಾಲಯದ ನ್ಯಾಯಾಧೀಶರಾದ ಕುಮಾರ ಡಿ.ಕೆ. ಅವರು ಏಪ್ರಿಲ್ 2 ರಂದು ತೀರ್ಪು ಹೊರಡಿಸಿರುತ್ತಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮ ದೇಸಾಯಿ ಅವರು ಪ್ರಕರಣ ನಡೆಸಿ ವಾದ ಮಂಡಿಸಿದ್ದರು. ಮುನಿರಾಬಾದ ಪೋಲಿಸ ಠಾಣೆಯ ಸಿಬ್ಬಂದಿ ಅಮರೇಶ ಕಲಕೇರಿ ಹಾಗೂ ಹನುಮಂತಪ್ಪ ಭಜಂತ್ರಿ ಇವರು ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರಪಡಿಸುವಲ್ಲಿ ಸಾಕಷ್ಟು ಸಹಕರಿಸಿರುತ್ತಾರೆ ಎಂದು ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರ ಕಾರ್ಯಾಲಯದ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್