
ಬೆಂಗಳೂರು, 10 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮಾಜಿ ಪ್ರಧಾನಿ ಮೋರಾರ್ಜಿ ದೇಸಾಯಿ ಅವರ ಪುಣ್ಯತಿಥಿಯ ಅಂಗವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಮನ ಸಲ್ಲಿಸಿದ್ದಾರೆ.
ಈ ಕುರಿತು ಎಕ್ಸ ಖಾತೆಯಲ್ಲಿ ಪ್ರಕಟಣೆ ಹೊರಡಿಸಿರುವ ಅವರು, ಮೋರಾರ್ಜಿ ದೇಸಾಯಿ ಅವರು ಪ್ರಗತಿಪರ ಭೂಸುಧಾರಣೆಗಳನ್ನು ಜಾರಿಗೆ ತಂದ ತತ್ವಬದ್ಧ ನಾಯಕರು ಎಂದು ಸ್ಮರಿಸಿದರು. ಆಡಳಿತವನ್ನು ಸುವ್ಯವಸ್ಥಿತಗೊಳಿಸುವಲ್ಲಿ ಹಾಗೂ ಆರ್ಥಿಕ ಶಿಸ್ತನ್ನು ಖಾತ್ರಿಪಡಿಸುವಲ್ಲಿ ಅವರ ಪಾತ್ರ ಅತ್ಯಂತ ಮಹತ್ತರವಾಗಿದೆ ಎಂದು ಹೇಳಿದರು.
ಜನರ ಕಲ್ಯಾಣವನ್ನು ಸುಧಾರಿಸಲು ಮತ್ತು ಆಡಳಿತ ವ್ಯವಸ್ಥೆಯನ್ನು ಬಲಪಡಿಸಲು ದೇಸಾಯಿ ಅವರು ಅವಿರತವಾಗಿ ಶ್ರಮಿಸಿದ್ದರು. ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾಗಿ ಹಾಗೂ ರಾಷ್ಟ್ರನಿರ್ಮಾಪಕರಾಗಿ ಅವರು ದೇಶದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರವಾಗಿದೆ ಎಂದು ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಅವರ ಆದರ್ಶಗಳು ಇಂದಿನ ರಾಜಕೀಯ ಹಾಗೂ ಆಡಳಿತ ವ್ಯವಸ್ಥೆಗೆ ದಾರಿದೀಪವಾಗಿವೆ ಎಂದು ತಿಳಿಸಿರುಬ ಉಪ ಮುಖ್ಯಮಂತ್ರಿ, ಮಹಾನ್ ನಾಯಕನಿಗೆ ತಮ್ಮ ಗೌರವ ಅರ್ಪಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa