ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತೋತ್ಸವ
ಬಳ್ಳಾರಿ, 10 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಾರತ ಸಂವಿಧಾನದ ಶಿಲ್ಪಿ, ಮಹಾನ್ ಮಾನವತಾವಾದಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತೋತ್ಸವ ಕಾರ್ಯಕ್ರಮವನ್ನು ಏ.14 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ
ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತೋತ್ಸವ


ಬಳ್ಳಾರಿ, 10 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಭಾರತ ಸಂವಿಧಾನದ ಶಿಲ್ಪಿ, ಮಹಾನ್ ಮಾನವತಾವಾದಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತೋತ್ಸವ ಕಾರ್ಯಕ್ರಮವನ್ನು ಏ.14 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 09 ಗಂಟೆಗೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದ ಆವರಣದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಗಣ್ಯರಿಂದ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಲಾಗುವುದು.

ಬಳಿಕ ಬೆಳಿಗ್ಗೆ 09.30 ಗಂಟೆಗೆ ಮುನ್ಸಿಪಲ್ ಕಾಲೇಜು ಮೈದಾನದಿಂದ ಮೆರವಣಿಗೆ ಆರಂಭವಾಗಲಿದೆ. ಈ ಮೆರವಣಿಗೆಯು ಗಡಿಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಹೆಚ್.ಗವಿಯಪ್ಪ ವೃತ್ತ ಹಾಗೂ ಹಳೆ ಜಿಲ್ಲಾಧಿಕಾರಿಗಳ ಕಚೇರಿ ಮಾರ್ಗವಾಗಿ ಸಾಗಿ ಪುನಃ ಮುನ್ಸಿಪಲ್ ಕಾಲೇಜು ಮೈದಾನಕ್ಕೆ ತಲುಪಲಿದೆ.

ಕಾರ್ಯಕ್ರಮದಲ್ಲಿ ಜಿಲ್ಲೆಯ ಸಮಸ್ತ ಗಣ್ಯರು, ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಶಿಕ್ಷಕರು, ಉಪನ್ಯಾಸಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಯಂತೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande