
ಬೆಂಗಳೂರು, 10 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ರಾಜ್ಯದಾದ್ಯಂತ ಮುಂದಿನ ಏಳು ದಿನಗಳ ಕಾಲ ಸಾಮಾನ್ಯವಾಗಿ ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.
ಮಧ್ಯಾಹ್ನ ನಂತರ ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಏಪ್ರಿಲ್ 13ರವರೆಗೆ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಇನ್ನೊಂದೆಡೆ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಬದಲಾವಣೆ ಕಾಣಿಸಿಕೊಳ್ಳದೇ, ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa