ಭಾಗ್ಯನಗರ ಪ.ಪಂ : ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ ರಚನೆ
ಕೊಪ್ಪಳ, 10 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಾಗ್ಯನಗರ ಪಟ್ಟಣ ಪಂಚಾಯತಿಯಲ್ಲಿ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿಯನ್ನು ರಚನೆ ಮಾಡಲಾಗಿದೆ. ಸರ್ಕಾರದ ಉಪ ಕಾರ್ಯದರ್ಶಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆರವರ ಅಧಿಸೂಚನೆಯಂತ
ಭಾಗ್ಯನಗರ ಪ.ಪಂ : ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ ರಚನೆ


ಕೊಪ್ಪಳ, 10 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಭಾಗ್ಯನಗರ ಪಟ್ಟಣ ಪಂಚಾಯತಿಯಲ್ಲಿ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿಯನ್ನು ರಚನೆ ಮಾಡಲಾಗಿದೆ.

ಸರ್ಕಾರದ ಉಪ ಕಾರ್ಯದರ್ಶಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆರವರ ಅಧಿಸೂಚನೆಯಂತೆ ಭಾಗ್ಯನಗರ ಪಟ್ಟಣ ಪಂಚಾಯತ ಅಧ್ಯಕ್ಷರಾದ ರಮೇಶ ಲಕ್ಷ್ಮಪ್ಪ ಹ್ಯಾಟಿ ಇವರ ಅಧ್ಯಕ್ಷತೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟಲು ಮತ್ತು ಬಾಲ್ಯ ವಿವಾಹಗಳನ್ನು ತಡೆಯಲು ಹಾಗೂ ಸಮಗ್ರ ಮಕ್ಕಳ ರಕ್ಷಣೆಗಾಗಿ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿಯನ್ನು ರಚಿಸಲಾಗಿದ್ದು, ಪ.ಪಂ ಉಪಾಧ್ಯಕ್ಷರಾದ ಸರಸ್ವತಿ ಕೃಷ್ಣ ಇಟ್ಟಂಗಿ ಅವರು ಈ ಸಮಿತಿಯ ಉಪಾಧ್ಯಕ್ಷರಾಗಿರುತ್ತಾರೆ.

ಭಾಗ್ಯನಗರ ಪಟ್ಟಣ ಪಂಚಾಯತ್ ಎಲ್ಲಾ ಸದಸ್ಯರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ರವಿ ಬಡಿಗೇರ ಅವರು ಈ ಸಮಿತಿಯ ಸದಸ್ಯರಾಗಿದ್ದು, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಈ ಸಮಿತಿಗೆ ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ ಎಂದು ಭಾಗ್ಯನಗರ ಪಟ್ಟಣ ಪಂಚಾಯತ್ ಕಾರ್ಯಾಲಯದ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande