ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ನಡೆದಿದೆ
ಯಶವಂತ ವರ್ಮಾ


ನವದೆಹಲಿ, 10 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಯಶವಂತ್ ವರ್ಮಾ ಅವರು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ರಾಜೀನಾಮೆ ನೀಡಿದ್ದು, ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಿದ್ದಾರೆ.

ನ್ಯಾಯಮೂರ್ತಿ ವರ್ಮಾ ವಿರುದ್ಧ ವಾಗ್ದಂಡನೆ ಪ್ರಕ್ರಿಯೆ ಆರಂಭವಾಗಿರುವ ಹಿನ್ನೆಲೆ, ಈ ವಿದ್ಯಮಾನ ನಡೆದಿದೆ. ಲೋಕ ಸಭಾ ಸ್ಪೀಕರ್ ನ್ಯಾಯಾಧೀಶರ ತನಿಖಾ ಕಾಯ್ದೆಯಡಿ ವಿಚಾರಣೆ ನಡೆಸಲು ತನಿಖಾ ಸಮಿತಿಯನ್ನು ರಚಿಸಿದ್ದರು.

ಈ ಆದೇಶವನ್ನು ಪ್ರಶ್ನಿಸಿ ನ್ಯಾಯಮೂರ್ತಿ ವರ್ಮಾ ಅವರು ಸರ್ವೋಚ್ಚ ನ್ಯಾಯಾಲಯದ ಮೊರೆ ಹೋಗಿದ್ದರೂ, ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಇದಕ್ಕೂ ಮುನ್ನ, 2025ರ ಮಾರ್ಚ್ 22ರಂದು ಸರ್ವೋಚ್ಚ ನ್ಯಾಯಾಲಯವು ಈ ಪ್ರಕರಣದ ತನಿಖೆಗೆ ಮೂವರು ಸದಸ್ಯರ ಸಮಿತಿಯನ್ನು ರಚಿಸಲು ಸೂಚಿಸಿತ್ತು.

ಈ ಸಮಿತಿಯಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಿ.ಎಸ್. ಸಂಧವಾಲಿಯಾ ಹಾಗೂ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಅನು ಶಿವರಾಮನ್ ಸದಸ್ಯರಾಗಿದ್ದರು.

ವಿಶೇಷವಾಗಿ, 2025ರ ಮಾರ್ಚ್ 14ರಂದು ಅವರು ದೆಹಲಿ ಉಚ್ಚ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿದ್ದಾಗ ಅವರ ನಿವಾಸದಲ್ಲಿ ಸಂಭವಿಸಿದ ಅಗ್ನಿ ಅವಘಡದ ನಂತರ ಅಗ್ನಿಶಾಮಕ ದಳವು ಹಣವನ್ನು ವಶಪಡಿಸಿಕೊಂಡ ಘಟನೆ ಈ ವಿವಾದಕ್ಕೆ ಕಾರಣವಾಗಿತ್ತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande