ಕನ್ನಡ ಅನುಷ್ಠಾನ ಪರಿಣಾಮಕಾರಿಯಾಗಲಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್
ಗದಗ, 10 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯಲ್ಲಿ ಕನ್ನಡ ಭಾಷೆಯ ಅನುಷ್ಠಾನ ಪರಿಣಾಮಕಾರಿಯಾಗಬೇಕು. ಪ್ರತಿ ತಿಂಗಳು 5 ನೇ ತಾರಿಖಿನೊಳಗಾಗಿ ಎಲ್ಲ ಇಲಾಖೆಯುವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಕನ್ನಡ ಅನುಷ್ಟಾನ ವರದಿಯನ್ನು ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು
ಫೋಟೋ


ಗದಗ, 10 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯಲ್ಲಿ ಕನ್ನಡ ಭಾಷೆಯ ಅನುಷ್ಠಾನ ಪರಿಣಾಮಕಾರಿಯಾಗಬೇಕು. ಪ್ರತಿ ತಿಂಗಳು 5 ನೇ ತಾರಿಖಿನೊಳಗಾಗಿ ಎಲ್ಲ ಇಲಾಖೆಯುವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಕನ್ನಡ ಅನುಷ್ಟಾನ ವರದಿಯನ್ನು ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ಗದಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜರುಗಿದ ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯ ಸರ್ಕಾರದ ಇಲಾಖೆಗಳು, ಉದ್ಯಮಗಳು ಅಥವಾ ಸ್ವಾಯತ್ತ ಸಂಸ್ಥೆಗಳು, ಸಹಕಾರ ಮತ್ತು ಸಾರ್ವಜನಿಕ ಉದ್ಯಮಗಳು , ಶೈಕ್ಷಣಿಕ ಸಂಸ್ಥೆಗಳು, ಬ್ಯಾಂಕುಗಳು, ಹಣಕಾಸು ಸಂಸ್ಥೆಗಳು, ಖಾಸಗಿ ಕೈಗಾರಿಕೆಗಳು ಮತ್ತು ವಿಶ್ವ ವಿದ್ಯಾಲಯಗಳು ಕನ್ನಡ ಭಾಷೆಯಲ್ಲಿಯೇ ಪತ್ರ ವ್ಯವಹಾರ ಮಾಡಬೇಕು. ಪ್ರತಿ ತಿಂಗಳು ಜರುಗುವ ಕೆಡಿಪಿ ಸಭೆ ಅಜೆಂಡಾದಲ್ಲಿ ಕನ್ನಡ ಅನುಷ್ಟಾನದ ವರದಿ ಬಗ್ಗೆಯೂ ಚರ್ಚೆಯಾಗಬೇಕು ಎಂದರು.

ಕನ್ನಡ ಭಾಷಾ ಅನುಷ್ಟಾನಗೊಳಿಸಲು ಪ್ರತಿ ತಾಲೂಕಿನಲ್ಲಿ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಸಮಿತಿ ಸಭೆ ಕರೆದು ತಾಲೂಕಿನಾದ್ಯಂತ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕೈಗೊಳ್ಳಬೇಕು. ಬೇರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಆಗಮಿಸಿದ ಬ್ಯಾಂಕ್ ನೌಕರರಿಗೆ ಕನ್ನಡ ಭಾಷಾ ತರಬೇತಿಯನ್ನು ಹಮ್ಮಿಕೊಂಡು ಅವರು ಕಡ್ಡಾಯವಾಗಿ ತರಬೇತಿಗೆ ಹಾಜರಾಗುವ ಹಾಗೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ನಿರ್ದೇಶನ ನೀಡಿದರು.

ಇದೇ ಸಂದರ್ಭದಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರ ಅಥವಾ ಸ್ಥಳೀಯ ಪ್ರಾದಿಕಾರಗಳೀಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ ಹೋಟೆಲ್ ಗಳು, ಸಾರಿಗೆ ವಿಭಾಗ ಗಳಲ್ಲಿ ಕನ್ನಡ ಭಾಷೆಯ ನಾಮಫಲಕಗಳ ಪ್ರದರ್ಶನದ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಡಿವೈಎಸ್ ಪಿ ಮುರ್ತುಜಾ ಖಾದ್ರಿ, ಜಿ.ಪಂ.ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಕಿಶೋರ ಬಾಬು, ಕನ್ನಡ ಜಾಗ್ರತಿ ಸಮಿತಿಯ ಅಧಿಕಾರೇತರ ಸದಸ್ಯರುಗಳಾದ ಅಶೋಕ ಬರಗುಂಡಿ, ರಾಜಶೇಖರ ದಾನರೆಡ್ಡಿ, ಮುತ್ತು ಬಿಳಿಎಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ, ಲೀಡ್ ಬ್ಯಾಂಕ್ ಮ್ಯಾನೇಜರ್ ಸಂತೋಷ್ , ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಡಾ.ನಂದಾ ಹಣಬರಟ್ಟಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶ ಆರ್.ಎಸ್.ಬುರುಡಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎಂ.ಎಂ.ತುಂಬರಮಟ್ಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande