ಖಾಸಗಿ ಇಂಧನ ಕಂಪನಿಗಳ ಜೊತೆ ಸಚಿವ ಮುನಿಯಪ್ಪ ಸಭೆ
ಬೆಂಗಳೂರು, 10 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ವಸಂತನಗರದ ಆಹಾರ ಭವನದಲ್ಲಿ ರಾಜ್ಯ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು ಖಾಸಗಿ ಇಂಧನ ಕಂಪನಿಗಳ ಮುಖ್ಯಸ್ಥರೊಂದಿಗೆ ಮಹತ್ವದ ಸಭೆ ನಡೆಸಿ, ಎಲ್ಪಿಜಿ ಗ್ಯಾಸ್ ದರ ನಿಯಂತ್ರಣ ಕುರಿತು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಮಾತನ
Meeting


ಬೆಂಗಳೂರು, 10 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ವಸಂತನಗರದ ಆಹಾರ ಭವನದಲ್ಲಿ ರಾಜ್ಯ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು ಖಾಸಗಿ ಇಂಧನ ಕಂಪನಿಗಳ ಮುಖ್ಯಸ್ಥರೊಂದಿಗೆ ಮಹತ್ವದ ಸಭೆ ನಡೆಸಿ, ಎಲ್ಪಿಜಿ ಗ್ಯಾಸ್ ದರ ನಿಯಂತ್ರಣ ಕುರಿತು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಮಾತನಾಡಿದ ಸಚಿವರು, ಮಾರುಕಟ್ಟೆಯಲ್ಲಿ ಗ್ರಾಹಕರೇ ಪ್ರಮುಖರಾಗಿದ್ದು, ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ದರ ಹೆಚ್ಚಿಸುವುದು ಸರಿಯಲ್ಲ ಎಂದು ತಿಳಿಸಿದರು. ಸರ್ಕಾರ ನಿಗದಿಪಡಿಸಿದ ದರಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕಂಪನಿಗಳಿಗೆ ಸೂಚನೆ ನೀಡಿದರು. ದರಗಳಲ್ಲಿ ಏಕರೂಪತೆ ಕಾಪಾಡುವ ಬಗ್ಗೆ ಕಂಪನಿಗಳೊಂದಿಗೆ ಚರ್ಚಿಸಿ, ಗ್ರಾಹಕರ ಹಿತಾಸಕ್ತಿಯನ್ನು ಪ್ರಾಮುಖ್ಯತೆಯಾಗಿ ಪರಿಗಣಿಸಬೇಕೆಂದು ಹೇಳಿದರು.

ಖಾಸಗಿ ಕಂಪನಿಗಳಿಂದ ಹೆಚ್ಚಿದ ದರಗಳು ಗ್ರಾಹಕರಲ್ಲಿ ಗೊಂದಲಕ್ಕೆ ಕಾರಣವಾಗುತ್ತಿರುವುದನ್ನು ಉಲ್ಲೇಖಿಸಿದ ಸಚಿವರು, ದರಗಳನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ ಜನತೆಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡಿದರು.

ಸಭೆಯಲ್ಲಿ ಇಂಧನ ಕಂಪನಿಗಳ ನೋಡಲ್ ಅಧಿಕಾರಿ ರುತ್ವಿಕ್ ರಂಜನ್ ಪಾಂಡೆ, ಸಚಿವರ ಆಪ್ತ ಕಾರ್ಯದರ್ಶಿ ಡಾ. ಹೆಚ್. ನಟರಾಜ್, ಕಾನೂನು ಮಾಪನ ಶಾಸ್ತ್ರ ಇಲಾಖೆಯ ನಿಯಂತ್ರಕ ಎಂ.ಎಸ್.ಎನ್. ಬಾಬು, ಆಹಾರ ಇಲಾಖೆಯ ಜಂಟಿ ನಿರ್ದೇಶಕಿ ರಮ್ಯ ಸೇರಿದಂತೆ ವಿವಿಧ ಖಾಸಗಿ ಗ್ಯಾಸ್ ಕಂಪನಿಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ರಿಲಯನ್ಸ್ ಗ್ಯಾಸ್, ಆಟೀ ಸ್ಟೆಪ್ ಗ್ಯಾಸ್, ಟೋಟಲ್ ಗ್ಯಾಸ್, ಯುನಿ ಗ್ಯಾಸ್, ನಿಕೊ ಗ್ಯಾಸ್, ಗೋ ಗ್ಯಾಸ್ ಸಂಸ್ಥೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು, ಗ್ರಾಹಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande