ನಿತೀಶ್ ಕುಮಾರ್, ಹರಿವಂಶ್ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ
ನವದೆಹಲಿ, 10 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಜ್ಯ ಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ನಿರ್ಗಮಿತ ಉಪಸಭಾಪತಿ ಹರಿವಂಶ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿದ ಸಂದೇಶದಲ್ಲಿ
Honour


ನವದೆಹಲಿ, 10 ಏಪ್ರಿಲ್ (ಹಿ.ಸ.) :

ಆ್ಯಂಕರ್ : ರಾಜ್ಯ ಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ನಿರ್ಗಮಿತ ಉಪಸಭಾಪತಿ ಹರಿವಂಶ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿದ ಸಂದೇಶದಲ್ಲಿ, ಮೋದಿ ಅವರು ನಿತೀಶ್ ಕುಮಾರ್ ಅವರನ್ನು ದೇಶದ ಅತ್ಯಂತ ಅನುಭವಿ ನಾಯಕರಲ್ಲಿ ಒಬ್ಬರೆಂದು ಹೊಗಳಿದರು. ಉತ್ತಮ ಆಡಳಿತದ ಬಗ್ಗೆ ಅವರ ಬದ್ಧತೆಯನ್ನು ದೇಶಾದ್ಯಂತ ಪ್ರಶಂಸಿಸಲಾಗಿದೆ ಎಂದು ಹೇಳಿದ ಪ್ರಧಾನಿ, ಬಿಹಾರದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅಮೂಲ್ಯವಾಗಿದೆ ಎಂದರು. ಮತ್ತೊಮ್ಮೆ ಸಂಸತ್ತಿನಲ್ಲಿ ಅವರನ್ನು ಕಾಣುತ್ತಿರುವುದು ಸಂತೋಷಕರವೆಂದು ತಿಳಿಸಿದರು.

ನಿತೀಶ್ ಕುಮಾರ್ ಅವರ ದೀರ್ಘ ರಾಜಕೀಯ ಅನುಭವವು ಸಂಸತ್ತಿನ ಚರ್ಚೆಗಳ ಗುಣಮಟ್ಟವನ್ನು ಹೆಚ್ಚಿಸಲಿದೆ ಎಂಬ ವಿಶ್ವಾಸವನ್ನು ಮೋದಿ ವ್ಯಕ್ತಪಡಿಸಿದರು. ಅವರ ಮುಂದಿನ ಅಧಿಕಾರಾವಧಿಗೆ ಶುಭಾಶಯಗಳನ್ನೂ ಕೋರಿದರು.

ಇನ್ನೊಂದೆಡೆ, ಹರಿವಂಶ್ ಅವರ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಅವರು ಪತ್ರಿಕೋದ್ಯಮ ಹಾಗೂ ಸಾರ್ವಜನಿಕ ಜೀವನಕ್ಕೆ ನೀಡಿದ ಕೊಡುಗೆಯನ್ನು ಮೆಚ್ಚಿಕೊಂಡರು. ಅವರ ಆಳವಾದ ಚಿಂತನೆಗಳು ಮತ್ತು ಒಳನೋಟಗಳು ಸದನದ ಕಾರ್ಯಚಟುವಟಿಕೆಗಳನ್ನು ಶ್ರೀಮಂತಗೊಳಿಸಿವೆ ಎಂದು ಪ್ರಶಂಸಿಸಿದರು.

ಈ ವೇಳೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹರಿವಂಶ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದು, ಅವರ ಹಿಂದಿನ ಅವಧಿ ಏಪ್ರಿಲ್ 9ರಂದು ಪೂರ್ಣಗೊಂಡಿತ್ತು.

ಸಂಸತ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿ ಸಿ. ಪಿ. ರಾಧಾಕೃಷ್ಣನ್ ಅವರು ಇಬ್ಬರಿಗೂ ಪ್ರಮಾಣ ವಚನ ಬೋಧಿಸಿದರು.

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ಅವಧಿ ಪೂರ್ಣಗೊಂಡ ಹಿನ್ನೆಲೆ ಈ ಸ್ಥಾನ ಖಾಲಿಯಾಗಿತ್ತು. ರಾಜ್ಯಸಭೆಗೆ ಒಟ್ಟು 12 ಸದಸ್ಯರನ್ನು ರಾಷ್ಟ್ರಪತಿಗಳು ನಾಮನಿರ್ದೇಶನ ಮಾಡುತ್ತಾರೆ. ಕಲೆ, ಸಾಹಿತ್ಯ, ವಿಜ್ಞಾನ ಹಾಗೂ ಸಮಾಜಸೇವೆಯಲ್ಲಿ ವಿಶಿಷ್ಟ ಕೊಡುಗೆ ನೀಡಿದವರನ್ನು ಈ ಸ್ಥಾನಕ್ಕೆ ಆಯ್ಕೆ ಮಾಡಲಾಗುತ್ತದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande