
ಬಳ್ಳಾರಿ, 10 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಳ್ಳಾರಿಯ ಸೆಂಟ್ರಲ್ ಜೈಲ್ ಮೇಲೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ಅವರ ನೇತೃತ್ವದಲ್ಲಿ ಗುರುವಾರ ಸಂಜೆ ದಾಳಿ ನಡೆದಿದ್ದು, ಯಾವುದೇ ಮೊಬೈಲ್, ಮಾದಕ ಪದಾರ್ಥಗಳು ಸಿಕ್ಕಿಲ್ಲ ಎಂದು ಮೂಲಗಳು ಖಚಿತಪಡಿಸಿವೆ.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ಅವರ ನೇತೃತ್ವದಲ್ಲಿ ಸೆಂಟ್ರಲ್ ಜೈಲ್ಗೆ ಗುರುವಾರ ಸಂಜೆ 6.30ರ ಸುಮಾರಿಗೆ ಏಕಾಏಕಿ ಆಗಮಿಸಿದ 150 ಕ್ಕೂ ಹೆಚ್ಚಿನ ಸಿಬ್ಬಂದಿಯ ತನಿಖಾ ತಂಡವು, ಏಕಾ ಏಕಿ ಎಲ್ಲಾ ಬ್ಯಾರಕ್ಗಳನ್ನು - ಕೋಣೆಗಳನ್ನು ಪರಿಶೀಲನೆ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಕೈದಿಗಳು ಸೊಳ್ಳೆ ಪರದೆಯನ್ನು ಕಟ್ಟಿಕೊಳ್ಳಲು ತಂದಿದ್ದ ದಾರ ಮತ್ತು ಪಿನ್ನುಗಳು ಮಾತ್ರ ಸಿಕ್ಕಿವೆ. ಇವುಗಳ ಕುರಿತು ಪರಿಶೀಲನೆ ನಡೆಸಲು ಪೊಲೀಸ್ ಅಧಿಕಾರಿಗಳು ಲಿಖಿತವಾಗಿ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್