ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿ ನಿಮಿತ್ಯ ಪೂರ್ವಸಿದ್ಧತಾ ಸಭೆ
ಗದಗ, 10 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಏಪ್ರಿಲ್ 21 ರಂದು ನಗರದ ಶ್ರೀ ಶಂಕರಾಚಾರ್ಯರ ಮಠದಲ್ಲಿ ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್ ತಿಳಿಸಿದರು. ಗದಗ ನಗರದ ಜಿಲ್ಲಾಧಿಕಾರಿಗಳ
ಫೋಟೋ


ಗದಗ, 10 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಏಪ್ರಿಲ್ 21 ರಂದು ನಗರದ ಶ್ರೀ ಶಂಕರಾಚಾರ್ಯರ ಮಠದಲ್ಲಿ ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್ ತಿಳಿಸಿದರು.

ಗದಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಶ್ರೀ ಶಂಕರಾಚಾರ್ಯರ ಜಯಂತಿ ನಿಮಿತ್ತ ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಶಿಷ್ಟಾಚಾರದನ್ವಯ ಆಮಂತ್ರಣ ಮುದ್ರಣಕ್ಕೆ ಕ್ರಮ ವಹಿಸಬೇಕು. ಎಸ್.ಎಸ್.ಎಲ್.ಸಿ, ಪಿ.ಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಮಾಜದ ಹಿರಿಯರಿಗೆ ಸನ್ಮಾನ ಕಾರ್ಯಕ್ರಮವು ಜಯಂತಿ ದಿನದಂದು ಜರುಗಲಿದೆ. ಜಗದ್ಗುರು ಶಂಕರಾಚಾರ್ಯರ ಕುರಿತು ಆಳವಾಗಿ ಅಧ್ಯಯನ ಮಾಡಿದವರಿಂದ ಉಪನ್ಯಾಸ ಕಾರ್ಯಕ್ರಮವು ಜರುಗುವುದು. ಒಟ್ಟಾರೆಯಾಗಿ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ನಿರ್ದೇಶನ ನೀಡಿದರು.

ಇದೇ ಸಂದರ್ಭದಲ್ಲಿ ಊಟೋಪಹಾರದ ವ್ಯವಸ್ಥೆ, ವೇದಿಕೆ ವ್ಯವಸ್ಥೆ, ಸ್ಪರ್ಧೆಗಳ ಆಯೋಜನೆ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಎಂ.ತುಂಬರಮಟ್ಟಿ, ರತ್ನಾಕರ್ಭಟ್ ಜೋಶಿ, ಶ್ರೀನಿವಾಸ ಹುಯಿಲಗೋಳ ಪ್ರೊ. ಅನಿಲ ವೈದ್ಯ, ಪ್ರೊ.ದತ್ತಪ್ರಸನ್ನ ಪಾಟೀಲ, ಗಿರೀಶ ಪಂತರ, ರವೀಂದ್ರ ಜೋಶಿ, ಪ್ರಾಣೇಶ ಕುಲಕರ್ಣಿ, ರವಿ ಪೂಜಾರ, ಅನಿಲ ತೆಂಬದಮನಿ, ದತ್ತಂಭಟ್ ತೆಂಬದಮನಿ, ದತ್ತಣ್ಣ ಜೋಶಿ, ನಾಗರಾಜ ಕುಲಕರ್ಣಿ, ಪ್ರಶಾಂತ ಪಾಟೀಲ, ಶ್ರೀಮತಿ ಸುಮನ್ ಪಾಟೀಲ, ಹೇಮಂತ ಕುಲಕರ್ಣಿ, ಶ್ರೀಮತಿ ಕಲಾವತಿ ಅಲಗೂರ ಸಮಾಜದ ಗಣ್ಯರು, ಹಿರಿಯರು ಹಾಜರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ ಸರ್ವರಿಗೂ ಸ್ವಾಗತಿಸಿ ವಂದಿಸಿದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande