ಮಹನೀಯರ ಜಯಂತಿ ಆಚರಣೆಗೆ ಕುರಿತು ಪೂರ್ವಭಾವಿ ಸಭೆ
ಚಿತ್ರದುರ್ಗ, 10 ಏಪ್ರಿಲ್ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ಸರ್ಕಾರದ ವತಿಯಿಂದ ನಡೆಯಲಿರುವ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಉಪವಿಭಾಗಾಧಿಕಾರಿ ಡಾ. ಕೆ.ಜೆ. ಕಾಂತರಾಜ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನ
Meeting


ಚಿತ್ರದುರ್ಗ, 10 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ಸರ್ಕಾರದ ವತಿಯಿಂದ ನಡೆಯಲಿರುವ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಉಪವಿಭಾಗಾಧಿಕಾರಿ ಡಾ. ಕೆ.ಜೆ. ಕಾಂತರಾಜ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಏಪ್ರಿಲ್ 20ರಂದು ಶ್ರೀ ಬಸವ ಜಯಂತಿ, ಏಪ್ರಿಲ್ 21ರಂದು ಶ್ರೀ ಶಂಕರಾಚಾರ್ಯರ ಜಯಂತಿ ಹಾಗೂ ಏಪ್ರಿಲ್ 23ರಂದು ಶ್ರೀ ಭಗೀರಥ ಜಯಂತಿ ಕಾರ್ಯಕ್ರಮಗಳನ್ನು ಸರಕಾರದ ಶಿಷ್ಟಾಚಾರದಂತೆ ವಿಜೃಂಭಣೆಯಿಂದ ಆಚರಿಸುವಂತೆ ನಿರ್ದೇಶಿಸಿದರು.

ಸಭೆಯಲ್ಲಿ ವಿವಿಧ ಸಮಾಜಗಳ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande