ಕಾರಟಗಿ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನೂರರಷ್ಟು ಫಲಿತಾಂಶ
ಕಾರಟಗಿ, 10 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕಮ್ಮವಾರಿ ಶಿಕ್ಷಣ ಸಂಸ್ಥೆ (ರಿ.) ರೆಡ್ಡಿ ವೀರಣ್ಣ ಸಂಜೀವಪ್ಪ ಪದವಿ ಪೂರ್ವ ಕಾಲೇಜು 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ - ಐತಿಹಾಸಿಕ ಸಾಧನೆ. ಈ ವೇಳೆ ಉತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ಸಂಸ್ಥೆ ವತಿಯಿಂದ ಸ
ಕಾರಟಗಿ


ಕಾರಟಗಿ, 10 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕಮ್ಮವಾರಿ ಶಿಕ್ಷಣ ಸಂಸ್ಥೆ (ರಿ.) ರೆಡ್ಡಿ ವೀರಣ್ಣ ಸಂಜೀವಪ್ಪ ಪದವಿ ಪೂರ್ವ ಕಾಲೇಜು 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ - ಐತಿಹಾಸಿಕ ಸಾಧನೆ.

ಈ ವೇಳೆ ಉತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ಸಂಸ್ಥೆ ವತಿಯಿಂದ ಸನ್ಮಾನ ಸಮಾರೋಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಕೊಲ್ಲಾ ಶೇಷಗಿರಿರಾವ್ ಮಾತನಾಡಿ ನಮ್ಮ ಹೆಮ್ಮೆಯ ಶಿಕ್ಷಣ ಸಂಸ್ಥೆಯು 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರರಷ್ಟು (100%) ಫಲಿತಾಂಶವನ್ನು ಪಡೆಯುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಹಾಗೂ ರಾಜ್ಯಕ್ಕೆ ಆರನೇ ರ್ಯಾಂಕ್

ಕಾರಟಗಿ ತಾಲೂಕಿಗೆ ಮೊದಲನೇ ರ್ಯಾಂಕ್ ಬಂದಿರುವುದು ವಿಶೇಷವಾಗಿದೆ.

ಶಿಕ್ಷಕರಾದ ಅಮರೇಶ್ ಬಿ ಮಾತನಾಡಿ ವಿಜ್ಞಾನ ವಿಭಾಗದಲ್ಲಿ ಒಟ್ಟು 62 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ ಡಿಸ್ಟಿಂಕ್ಷನ್ 47, ಪ್ರಥಮ ದರ್ಜೆ 15, ವಾಣಿಜ್ಯ ವಿಭಾಗದಲ್ಲಿ ಒಟ್ಟು 41 ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದು ಡಿಸ್ಟಿಂಕ್ಷನ್ 20 ಪ್ರಥಮ ದರ್ಜೆ 21 ಪಡೆದು ಅತ್ಯುತ್ತಮ ಅಂಕಗಳನ್ನು ಗಳಿಸಿ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಸಾಧನೆಗೈದ ವಿದ್ಯಾರ್ಥಿಗಳ ವಿವರ:

ಸಂಗೀತ ಗೈನ್ ವಿಜ್ಞಾನ 594/600

ಸೈಯದ್ ಫಾತಿಮಾ ಜೋಹರ ವಿಜ್ಞಾನ 594/600

ಶಿರೀಷ ವಿಜ್ಞಾನ 590/600

ಎನ್. ಸ್ನೇಹ ವಿಜ್ಞಾನ 588/600

ತೇಜಸ್ವಿನಿ ಪಿ. ವಾಣಿಜ್ಯ 593/600

ಗಾಯತ್ರಿ ವಾಣಿಜ್ಯ 589/600. ಅಂಕಗಳನ್ನು ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀಮನ್ ನಾರಾಯಣ, ಕಾರ್ಯದರ್ಶಿಗಳಾದ ಶ್ರೀ ಎಲ್. ವೀರಭದ್ರ ರಾವ್, ಪ್ರಾಚಾರ್ಯರಾದ ಡಾ. ಮಹಮ್ಮದ್ ರಫೀಕ್, ICSE ವಿಭಾಗದ ಪ್ರಾಂಶುಪಾಲರಾದ ಶ್ರೀದೇವಿ ಕೊಲ್ಲಾ ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande