



ಗಂಗಾವತಿ, 10 ಏಪ್ರಿಲ್ (ಹಿ.ಸ.) :
ಆ್ಯಂಕರ್ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶ್ರೀಮತಿ ವೈ.ಜೆ.ಆರ್ ಪದವಿಪೂರ್ವ ಕಾಲೇಜಿನ ಅದ್ಭುತ ಪೂರ್ವ ಸಾಧನೆ.
2026ರ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಗಂಗಾವತಿಯ ವಿದ್ಯಾನಗರದಲ್ಲಿರುವ ಶ್ರೀ ಶಾರದಾ ವಿದ್ಯಾಸಂಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀಮತಿ ವೈ.ಜೆ.ಆರ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಕುಮಾರಿ ಜಿ. ದಿವ್ಯ ಅವರು 600ರಲ್ಲಿ 594 ಅಂಕಗಳನ್ನು ಪಡೆದು ರಾಜ್ಯಕ್ಕೆ 7ನೇ ಸ್ಥಾನವನ್ನು ಪಡೆದಿದ್ದಾರೆ, ಕುಮಾರಿ ಸೌಮ್ಯ ಭಂಡಾರಿ ಅವರು 592 ಅಂಕಗಳನ್ನು ಪಡೆದು ರಾಜ್ಯಕ್ಕೆ 9ನೇ ಸ್ಥಾನವನ್ನು ಹಾಗೂ ಕುಮಾರಿ ದಿಯಾ ಪಿ. ಖಂಡೆಲ್ವಾಲ್ ಅವರು 591 ಅಂಕಗಳನ್ನು ಪಡೆದು ರಾಜ್ಯಕ್ಕೆ 10ನೇ ಸ್ಥಾನವನ್ನು ಪಡೆದಿದ್ದಾರೆ.
ಇನ್ನೂ ವಿಜ್ಞಾನ ವಿಭಾಗದಲ್ಲಿ ಕುಮಾರಿ ಜಿ. ಶ್ರೀ ಪ್ರಣವಿ 594 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 6ನೇ ಸ್ಥಾನ ಹಾಗೂ ಪಿ. ರೇವಂತ್ ಕುಮಾರ್ ಅವರು 591 ಅಂಕಗಳನ್ನು ಪಡೆದು ರಾಜ್ಯಕ್ಕೆ 9ನೇ ಸ್ಥಾನವನ್ನು ಪಡೆದಿದ್ದಾರೆ ಹಾಗೂ ದೊಡ್ಡಬಸವ ಅವರು 589 ಅಂಕಗಳನ್ನು ಪಡೆದು ಜಿಲ್ಲಾಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಕಾಲೇಜಿನ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಪೋಷಕರು ಹಾಗೂ ವಿದ್ಯಾರ್ಥಿಗಳು ಸಂತೋಷ ವ್ಯಕ್ತಪಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್