ನಾಡೋಜ ರಾಮಸ್ವಾಮಿ ನಿಧನಕ್ಕೆ ವಿಜಯೇಂದ್ರ ಸಂತಾಪ
ಬೆಂಗಳೂರು, 10 ಏಪ್ರಿಲ್ (ಹಿ.ಸ.) : ಆ್ಯಂಕರ್ : ಹಿರಿಯ ಸಾಹಿತಿ, ಪತ್ರಕರ್ತ ಹಾಗೂ ರಾಷ್ಟ್ರೋತ್ಥಾನ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ಡಾ. ಎಸ್.ಆರ್. ರಾಮಸ್ವಾಮಿ ಅವರ ನಿಧನದ ಸುದ್ದಿ ರಾಜ್ಯದ ಸಾಹಿತ್ಯ, ಸಾಂಸ್ಕೃತಿಕ ವಲಯದಲ್ಲಿ ಆಳವಾದ ದುಃಖವನ್ನುಂಟುಮಾಡಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬ
Nadoja S. R. Ramaswamy


ಬೆಂಗಳೂರು, 10 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಹಿರಿಯ ಸಾಹಿತಿ, ಪತ್ರಕರ್ತ ಹಾಗೂ ರಾಷ್ಟ್ರೋತ್ಥಾನ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ಡಾ. ಎಸ್.ಆರ್. ರಾಮಸ್ವಾಮಿ ಅವರ ನಿಧನದ ಸುದ್ದಿ ರಾಜ್ಯದ ಸಾಹಿತ್ಯ, ಸಾಂಸ್ಕೃತಿಕ ವಲಯದಲ್ಲಿ ಆಳವಾದ ದುಃಖವನ್ನುಂಟುಮಾಡಿದೆ.

ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಕ್ಸನಲ್ಲಿ ಸಂತಾಪ ಸೂಚಿಸಿ, ಡಾ. ರಾಮಸ್ವಾಮಿ ಅವರು ರಾಷ್ಟ್ರೀಯ ವಿಚಾರಧಾರೆ, ವೈಚಾರಿಕ ಸ್ಪಷ್ಟತೆ ಮತ್ತು ಸರಳ ಜೀವನಶೈಲಿಯ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಅವರ ಸಾರ್ಥಕ ಜೀವನ, ಮಾರ್ಗದರ್ಶನ ಹಾಗೂ ಸರಳ ವ್ಯಕ್ತಿತ್ವ ಎಲ್ಲರಿಗೂ ಆದರ್ಶಪ್ರಾಯವಾಗಿದ್ದು, ಅನೇಕ ಮಂದಿಗೆ ಪ್ರೇರಣೆಯಾಗಿದೆ. ಅವರ ಅಗಲಿಕೆ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಡಾ. ರಾಮಸ್ವಾಮಿ ಅವರ ಆತ್ಮಕ್ಕೆ ಚಿರಶಾಂತಿ ಕೋರಿ, ಅವರ ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ವಿಜಯೇಂದ್ರ ಅವರು ಸಂತಾಪ ಸೂಚಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande