ಬಂಗಾಳಕ್ಕೆ ಬಿಜೆಪಿ ‘ಸಂಕಲ್ಪ ಪತ್ರ’ ಬಿಡುಗಡೆ ; ಮಹಿಳೆಯರಿಗೆ ₹3,000 ಭತ್ಯೆ, ಉಚಿತ ಬಸ್ ಪ್ರಯಾಣ ಭರವಸೆ
ಕೋಲ್ಕತ್ತಾ, 10 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಕೋಲ್ಕತ್ತಾದಲ್ಲಿ ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷದ (ಬಿಜೆಪಿ) ಚುನಾವಣಾ ಪ್ರಣಾಳಿಕೆ ‘ಸಂಕಲ್ಪ ಪತ್ರ’ವನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಅಧಿಕಾ
ಅಮಿತ್ ಶಾ


ಕೋಲ್ಕತ್ತಾ, 10 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಕೋಲ್ಕತ್ತಾದಲ್ಲಿ ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷದ (ಬಿಜೆಪಿ) ಚುನಾವಣಾ ಪ್ರಣಾಳಿಕೆ ‘ಸಂಕಲ್ಪ ಪತ್ರ’ವನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಲ್ಲಿ ಅಭಿವೃದ್ಧಿ, ಉದ್ಯೋಗ, ಮಹಿಳಾ ಸುರಕ್ಷತೆ ಮತ್ತು ಆರೋಗ್ಯ ಸೇವೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಪ್ರಣಾಳಿಕೆಯಲ್ಲಿ ಮಹಿಳೆಯರು ಮತ್ತು ನಿರುದ್ಯೋಗಿ ಯುವಕರಿಗಾಗಿ ವಿಶೇಷ ಯೋಜನೆಗಳನ್ನು ಘೋಷಿಸಲಾಗಿದೆ. ಮಹಿಳೆಯರು ಹಾಗೂ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು ₹3000 ಭತ್ಯೆ ನೀಡುವುದಾಗಿ ಬಿಜೆಪಿ ಭರವಸೆ ನೀಡಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುತ್ತಿರುವ ಯುವಕರಿಗೆ ₹15,000 ಆರ್ಥಿಕ ಸಹಾಯ ನೀಡುವುದಾಗಿ ತಿಳಿಸಲಾಗಿದೆ.

ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ (ಡಿಎ) ಒದಗಿಸುವುದು ಹಾಗೂ ಅರ್ಹ ಅಭ್ಯರ್ಥಿಗಳಿಗೆ ಪಾರದರ್ಶಕ ವಿಧಾನದಲ್ಲಿ ಶಾಶ್ವತ ಉದ್ಯೋಗ ಕಲ್ಪಿಸುವುದಾಗಿ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರದಿಂದ ಸಿಗುವ ₹6000ಕ್ಕೆ ರಾಜ್ಯದಿಂದ ₹3000 ಹೆಚ್ಚುವರಿಯಾಗಿ ಸೇರಿಸಿ ಒಟ್ಟು ₹9000 ನೀಡುವ ಭರವಸೆ ನೀಡಲಾಗಿದೆ.

ಆರೋಗ್ಯ ಕ್ಷೇತ್ರದಲ್ಲಿ ಬಡವರಿಗೆ ಉಚಿತ ಚಿಕಿತ್ಸೆ ಒದಗಿಸಲು ಆಯುಷ್ಮಾನ್ ಭಾರತ್ ಯೋಜನೆಯನ್ನು ರಾಜ್ಯ ಯೋಜನೆಗಳೊಂದಿಗೆ ಜೋಡಿಸಲಾಗುವುದು ಎಂದು ಹೇಳಲಾಗಿದೆ. ಉತ್ತರ ಬಂಗಾಳದಲ್ಲಿ ಅತ್ಯಾಧುನಿಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೂ ಘೋಷಣೆ ಮಾಡಲಾಗಿದೆ.

ಮಹಿಳಾ ಸುರಕ್ಷತೆಗೆ ಒತ್ತು ನೀಡಿರುವ ಬಿಜೆಪಿ, ಎಲ್ಲಾ ಉದ್ಯೋಗಗಳಲ್ಲಿ 33% ಮೀಸಲಾತಿ, ಪ್ರತಿ ಮಂಡಲದಲ್ಲಿ ಮಹಿಳಾ ಪೊಲೀಸ್ ಠಾಣೆಗಳು ಹಾಗೂ ಪ್ರತಿ ಪೊಲೀಸ್ ಜಿಲ್ಲೆಯಲ್ಲಿ ಮಹಿಳಾ ಡೆಸ್ಕ್ ಸ್ಥಾಪನೆಗೆ ಭರವಸೆ ನೀಡಿದೆ. ಮಹಿಳೆಯರಿಗೆ ಶೇಕಡಾ 100ರಷ್ಟು ಉಚಿತ ಸಾರ್ವಜನಿಕ ಬಸ್ ಪ್ರಯಾಣ ಸೌಲಭ್ಯವೂ ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ.

ಕೋಲ್ಕತ್ತಾ ನಗರಕ್ಕೆ 10 ವರ್ಷಗಳ ವಿಶೇಷ ಅಭಿವೃದ್ಧಿ ಯೋಜನೆ, ಏಮ್ಸ್, ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆ, ಉತ್ತರ ಬಂಗಾಳದಲ್ಲಿ ನಾಲ್ಕು ಹೊಸ ಉಪನಗರಗಳ ನಿರ್ಮಾಣ ಹಾಗೂ ಡಾರ್ಜಿಲಿಂಗ್ ಅನ್ನು ಪ್ರಮುಖ ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಯೋಜನೆಗಳನ್ನೂ ಘೋಷಿಸಲಾಗಿದೆ.

ಈ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಟೀಕಿಸಿದ ಅಮಿತ್ ಶಾ, ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ “ಭಯರಹಿತ ಮತ್ತು ಭ್ರಷ್ಟಾಚಾರಮುಕ್ತ ಬಂಗಾಳ” ನಿರ್ಮಿಸಲಾಗುವುದು ಎಂದು ಹೇಳಿದರು. ಮುಖ್ಯಮಂತ್ರಿ ಸ್ಥಾನಕ್ಕೆ ಬಂಗಾಳದವರನ್ನೇ ಆಯ್ಕೆ ಮಾಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಇದಲ್ಲದೆ, ಬಿಜೆಪಿ ಸರ್ಕಾರ ರಚನೆಯಾದರೂ ರಾಜ್ಯದ ಇತ್ತೀಚಿನ ಯಾವುದೇ ಜನಪರ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ ಹಾಗೂ “ಮಚ್ಚ್ಲಿ-ಭಾತ್” ಸೇರಿದಂತೆ ಆಹಾರ ಯೋಜನೆಗಳು ಮುಂದುವರಿಯಲಿವೆ ಎಂದು ಶಾ ಭರವಸೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande