ಯಶಸ್ವಿನಿ ಯೋಜನೆ : ರಾಜ್ಯಕ್ಕೆ ಕೊಪ್ಪಳ ಜಿಲ್ಲೆ ಪ್ರಥಮ ಸ್ಥಾನ
ಕೊಪ್ಪಳ, 10 ಏಪ್ರಿಲ್ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿಗೆ ಯಶಸ್ವಿನಿ ಯೋಜನೆಯಡಿ ಜಿಲ್ಲೆಗೆ ನೀಡಿದ ಗುರಿ ಸಾಧಿಸುವಲ್ಲಿ ಕೊಪ್ಪಳ ಜಿಲ್ಲೆಯು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ ಎಂದು ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ. 2025-26ನೇ ಸಾಲಿಗೆ ಸಹಕಾರಿಗಳಿಗಾಗಿ
ಯಶಸ್ವಿನಿ ಯೋಜನೆ : ರಾಜ್ಯಕ್ಕೆ ಕೊಪ್ಪಳ ಜಿಲ್ಲೆ ಪ್ರಥಮ ಸ್ಥಾನ


ಕೊಪ್ಪಳ, 10 ಏಪ್ರಿಲ್ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿಗೆ ಯಶಸ್ವಿನಿ ಯೋಜನೆಯಡಿ ಜಿಲ್ಲೆಗೆ ನೀಡಿದ ಗುರಿ ಸಾಧಿಸುವಲ್ಲಿ ಕೊಪ್ಪಳ ಜಿಲ್ಲೆಯು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ ಎಂದು ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ.

2025-26ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಿ ಸದಸ್ಯರನ್ನು ನೋಂದಾಯಿಸಲು ಮಾರ್ಗಸೂಚಿಗಳೊಂದಿಗೆ ಸರ್ಕಾರವು ಆದೇಶವನ್ನು ಹೊರಡಿಸಿಲಾಗಿತ್ತು. ಅದರಂತೆ ಈ ಯೋಜನೆಯಡಿ ಕೊಪ್ಪಳ ಜಿಲ್ಲೆಗೆ 90 ಸಾವಿರ ಸದಸ್ಯರನ್ನು ನೋಂದಾಯಿಸವ ಗುರಿಯನ್ನು ನಿಗದಿಪಡಿಸಲಾಗಿತ್ತು. ಈ ಗುರಿ ಅನ್ವಯ ಕೊಪ್ಪಳ ಜಿಲ್ಲೆಯು ಶೇ 122 ರಷ್ಟು ಗುರಿ ಸಾಧಿಸಿ, ಕರ್ನಾಟಕ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿರುತ್ತದೆ.

ಈ ಗುರಿ ಸಾಧನೆಗೆ ಶ್ರಮಿಸಿದ ಸಹಕಾರ ಕ್ಷೇತ್ರದಲ್ಲಿನ ಎಲ್ಲಾ ಸದಸ್ಯರಿಗೆ, ಸಹಕಾರ ಇಲಾಖಾ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ, ಆರ್.ಕೆ.ಡಿ.ಸಿ.ಸಿ.ಬ್ಯಾಂಕಿನ ವ್ಯವಸ್ಥಾಪಕರಿಗೆ, ವೃತ್ತ ವೀಕ್ಷಕರಿಗೆ, ಕೆ.ಎಂ.ಎಫ್. ಸಂಸ್ಥೆಯ ಅಧಿಕಾರಿ, ಸಿಬ್ಬಂದಿಗಳಿಗೆ ಹಾಗೂ ಜಿಲ್ಲೆಯ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸಹಕಾರ ಇಲಾಖಾ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರ ಕಾರ್ಯಾಲಯದ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande