ಮಕ್ಕಳ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ
ಚಿತ್ರದುರ್ಗ, 10 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ವತಿಯಿಂದ 5 ರಿಂದ 16 ವರ್ಷದ ಮಕ್ಕಳಿಗಾಗಿ ಇದೇ ಏಪ್ರಿಲ್ 21 ರಿಂದ ಮೇ 07 ರವರಗೆ ಜಿಲ್ಲಾ ಮಟ್ಟದಲ್ಲಿ ಮಕ್ಕಳ ಬೇಸಿಗೆ ಶಿಬಿರ ಹಮ್ಮಿಕೊಳ್
ಮಕ್ಕಳ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ


ಚಿತ್ರದುರ್ಗ, 10 ಏಪ್ರಿಲ್ (ಹಿ.ಸ.) :

ಆ್ಯಂಕರ್ : ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ವತಿಯಿಂದ 5 ರಿಂದ 16 ವರ್ಷದ ಮಕ್ಕಳಿಗಾಗಿ ಇದೇ ಏಪ್ರಿಲ್ 21 ರಿಂದ ಮೇ 07 ರವರಗೆ ಜಿಲ್ಲಾ ಮಟ್ಟದಲ್ಲಿ ಮಕ್ಕಳ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ. ಏಪ್ರಿಲ್ 18 ಅರ್ಜಿ ಸಲ್ಲಿಸಲು ಕೊನೆಯ ದಿನ.

ಶಿಬಿರದಲ್ಲಿ ಮಕ್ಕಳಿಗೆ ಯೋಗ, ಧ್ಯಾನ, ಚಿತ್ರಕಲೆ, ಕರಾಟೆ, ಕರಕುಶಲತೆ, ನಾಟಕ, ಅಭಾಕಸ್, ಸಮೂಹನೃತ್ಯ, ಸಂಗೀತ, ಮಾತನಾಡುವ ಗೊಂಬೆ, ಮೇಹಂದಿ ಮುಂತಾದ ವಿಷಯಗಳಿಗೆ ಸೇರಿದಂತೆ, ಆಹ್ವಾನಿತ ಅಥಿತಿಗಳಿಂದ ಉಪನ್ಯಾಸವನ್ನು ಶಿಬಿರದ ತರಬೇತಿ ನೀಡಲಾಗುವುದು.

ಆಸಕ್ತ ಪೋಷಕರು ಮತ್ತು ಮಕ್ಕಳು ಏ.18 ರ ಸಂಜೆ 5.30 ರೊಳಗಾಗಿ ಹೆಸರನ್ನು ನೋಂದಾಯಿಸಿಕೊಳ್ಳಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಾರ್ಯದರ್ಶಿಗಳು, ಜಿಲ್ಲಾ ಬಾಲಭವನ ಸಮಿತಿ, ರಾಜೇಂದ್ರ ನಗರ, ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದ ಮುಂಭಾಗ, ಚಿತ್ರದುರ್ಗ ಹಾಗೂ ಡಿ.ಶ್ರೀಕುಮಾರ್, ಕಾರ್ಯಕ್ರಮ ಸಂಯೋಜಕ ಅವರ ಮೊಬೈಲ್ ಸಂಖ್ಯೆ 7259551325 ಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande