
ಮಂಡ್ಯ, 11 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಅಸಭ್ಯ ವರ್ತನೆಗಳನ್ನು ತಡೆಯುವ ಉದ್ದೇಶದಿಂದ ಮಂಡ್ಯ ಜಿಲ್ಲೆಯಲ್ಲಿ ‘ಅಕ್ಕ ಪಡೆ’ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ.
ಈ ಹಿನ್ನೆಲೆಯಲ್ಲಿ ಇಂದು ಮಂಡ್ಯ ನಗರದ ಬಾಲಭವನ ಪಾರ್ಕ್ ಬಳಿ ಅಕ್ಕ ಪಡೆಯ ಸಿಬ್ಬಂದಿಗಳು ಗಸ್ತು ನಡೆಸಿ, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ಸುರಕ್ಷತೆ ಹೆಚ್ಚಿಸುವುದರ ಜೊತೆಗೆ, ಯಾವುದೇ ಅನಾಹುತಗಳು ಸಂಭವಿಸಿದಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಮಹಿಳೆಯರು ಮತ್ತು ಮಕ್ಕಳಿಗೆ ಸಲಹೆ ನೀಡಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa