ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಿತ್ರದುರ್ಗ, 11 ಏಪ್ರಿಲ್ (ಹಿ.ಸ.) : ಆ್ಯಂಕರ್ : ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು 2026-27ನೇ ಸಾಲಿಗೆ, ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ವ್ಯಾಪ್ತಿಯಲ್ಲಿ ವಾಸವಿರುವ, 5ನೇ ತ
ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ


ಚಿತ್ರದುರ್ಗ, 11 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು 2026-27ನೇ ಸಾಲಿಗೆ, ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ವ್ಯಾಪ್ತಿಯಲ್ಲಿ ವಾಸವಿರುವ, 5ನೇ ತರಗತಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕಗಳಿಸಿದ, ಕುಟುಂಬದ ವಾರ್ಷಿಕ ವರಮಾನ ರೂ.2 ಲಕ್ಷ ಮಿತಿಯೊಳಗೆ ಇರುವ ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ದೃಢೀಕೃತ ಜಾತಿ ಆದಾಯ ಪ್ರಮಾಣ ಪತ್ರ ಹಾಗೂ ಶೇಕಡವಾರು ಅಂಕ ನಮೂದಿಸಿದ 5ನೇ ತರಗತಿ ಅಂಕಪಟ್ಟಿಯನ್ನು ಮುಖ್ಯೋಪಾಧ್ಯಾಯರಿಂದ ಭರ್ತಿ ಮಾಡಿಸಿ ಅರ್ಜಿಯೊಂದಿಗೆ ಸಲ್ಲಿಸಬೇಕು. ಅಂಕಪಟ್ಟಿಯಲ್ಲಿ ಗ್ರೇಡ್ಅನ್ನು ನಮೂದಿಸಿದ್ದಲ್ಲಿ ಅರ್ಜಿಯನ್ನು ಪರಿಗಣಿಸುವುದಿಲ್ಲ.

ಅರ್ಜಿ ಸಲ್ಲಿಸಲು ಮೇ.4 ಕೊನೆಯ ದಿನವಾಗಿದ್ದು, ಸಂಜೆ 5 ಗಂಟೆಯ ಒಳಗೆ ಭರ್ತಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ತಾಲ್ಲೂಕುಗಳ ಪರಿಶಿಷ್ಟ ವರ್ಗಗಳ ಹಾಗೂ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು. ಅವಧಿ ಮೀರಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಹತಾ ಪರೀಕ್ಷಾ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಆಯ್ಕೆಯಾದ ವಿದ್ಯಾರ್ಥಿಗಳ ಶುಲ್ಕ ಮತ್ತು ನಿರ್ವಹಣಾ ವೆಚ್ಚವನ್ನು ಸರ್ಕಾರ ನಿಗಧಿ ಪಡಿಸಿದ ದರದಲ್ಲಿ ನೀಡಲಾಗುವುದು.

ಪೋಷಕರು ಮೊದಲಿಗೆ ಆಯ್ಕೆ ಮಾಡಿದ ಶಾಲೆಗೆ ಮಾತ್ರ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಲಾಗುವುದು. ಶಾಲೆಯ ಬದಲಾವಣೆಗೆ ಅವಕಾಶವಿರುವುದಿಲ್ಲ.

ಆಯ್ಕೆಯಾದ ಶಾಲೆಯಲ್ಲಿ ಬೋಧಿಸುವ ಪಠ್ಯಕ್ರಮದಲ್ಲಿಯೇ ವಿದ್ಯಾರ್ಥಿ ಅಭ್ಯಾಸ ಮಾಡಬೇಕು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande