
ಇಂಫಾಲ, 11 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮಣಿಪುರ ರಾಜ್ಯದ ಉಖ್ರುಲ್ ಜಿಲ್ಲೆಯಲ್ಲಿಯ ಕುಕಿ ಮತ್ತು ನಾಗಾ ಉಗ್ರಗಾಮಿ ಸಂಘಟನೆಗಳ ನಡುವೆ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಬಿಎಸ್ಎಫ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಲಿಟನ್ ಪೊಲೀಸ್ ಠಾಣಾ ವ್ಯಾಪ್ತಿಯ ಮೊಂಗ್ಕೋಟ್ ಚೇಪು ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಎರಡು ಉಗ್ರ ಗುಂಪುಗಳ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿರುವುದಾಗಿ ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ.
ಬಿಎಸ್ಎಫ್ನ 170ನೇ ಬೆಟಾಲಿಯನ್ಗೆ ಸೇರಿದ ಕಾನ್ಸ್ಟೇಬಲ್ ಮಿಥುನ್ ಮಂಡಲ್ ಅವರು ಕರ್ತವ್ಯದ ವೇಳೆ ಶೌರ್ಯದಿಂದ ಹೋರಾಡುತ್ತಾ ಪ್ರಾಣತ್ಯಾಗ ಮಾಡಿದ್ದಾರೆ.
ಘಟನೆಯ ನಂತರ ಭದ್ರತಾ ಪಡೆಗಳು ಪ್ರದೇಶವನ್ನು ಸಂಪೂರ್ಣವಾಗಿ ಆವರಿಸಿಕೊಂಡು ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪರಿಸ್ಥಿತಿ ಉದ್ವಿಗ್ನವಾಗಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa